ADVERTISEMENT

ಇಂಡಿ: ಸಿಡಿಲು ಬಡಿದು ಬಾಲಕ ಸಾವು 

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2024, 16:07 IST
Last Updated 11 ಏಪ್ರಿಲ್ 2024, 16:07 IST
ಬೀರಪ್ಪ ನಿಂಗಪ್ಪ ಅವರಾದಿ 
ಬೀರಪ್ಪ ನಿಂಗಪ್ಪ ಅವರಾದಿ     

ಇಂಡಿ (ವಿಜಯಪುರ): ಗುರುವಾರ ಸಂಜೆ ಬಿರುಗಾಳಿ ಸಹಿತ ಸಿಡಿಲು ಅಪ್ಪಳಿಸಿ ಕುರಿ ಮೇಯಿಸುವ ಬೀರಪ್ಪ ನಿಂಗಪ್ಪ ಅವರಾದಿ (15) ಮೃತಪಟ್ಟಿರುವ ಘಟನೆ ಇಂಡಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಕುರಿ ಮೇಯಿಸುವಾಗ ಜೋರಾಗಿ ಬಿರುಗಾಳಿ, ತುಂತುರು ಮಳೆ ಬಂದಿತು. ಆಶ್ರಯ ಪಡೆಯಲು ಮರದ ಕೆಳಗೆ ನಿಂತಿದ್ದನು. ಆಗ ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕುಟುಂಬಕ್ಕೆ ಆಸರೆಯಾಗಿದ್ದ ಮಗನನ್ನು ಕಳೆದುಕೊಂಡ ತಂದೆ ತಾಯಿ ಮತ್ತು ಸಂಬಂಧಿಕರು ಗೋಳಾಡುತ್ತಿದ್ದಾರೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಇಂಡಿ ಶಹರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪ್ರಕರಣ ದಾಖಲಿಸಿಕೊಂಡಿದ್ಧಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.