ADVERTISEMENT

ಬಕ್ರೀದ್; ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ

ಮಸೀದಿಗಳಲ್ಲಿ ಮಾರ್ಗಸೂಚಿ ಪಾಲನೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 13:14 IST
Last Updated 18 ಜುಲೈ 2021, 13:14 IST

ವಿಜಯಪುರ: ಜುಲೈ 21 ರಂದು ಬಕ್ರೀದ್ ಅಂಗವಾಗಿ ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಿರ್ಬಂಧಿಸಲಾಗಿದೆ.ಮಸೀದಿಗಳಲ್ಲಿ ಪ್ರಾರ್ಥನೆಗೆ ಮಾರ್ಗಸೂಚಿ ಪಾಲನೆಗೆ ಜಿಲ್ಲಾಧಿಕಾರಿ ಸುನೀಲ್‌ ಕುಮಾರ್ ತಿಳಿಸಿದ್ದಾರೆ.

ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವಾಗ ಕೋವಿಡ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಆಯಾ ಮಸೀದಿಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ 50 ರಷ್ಟು ಜನರು ಮೀರದಂತೆ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಬಹುದು ಎಂದು ಸೂಚಿಸಿದ್ದಾರೆ.

ಒಂದು ವೇಳೆ ಅಧಿಕ ಜನಸಂಖ್ಯೆ ಆಗಮಿಸಿದ್ದಲ್ಲಿ ಪಂತಿಗಳಂತೆ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಆಯಾ ಮಸೀದಿಗಳಲ್ಲಿ ನಮಾಜ್ ಮಾಡಬಹುದಾಗಿದೆ.

ADVERTISEMENT

ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಪ್ರಾಣಿವಧೆ ಮತ್ತು ಬಲಿದಾನ ಪ್ರಕ್ರಿಯೆ ಸಂದರ್ಭದಲ್ಲಿಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಹಾಗೂ 65 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿ ಪ್ರಾರ್ಥನೆ ಮಾಡಬೇಕು ಎಂದು ತಿಳಿಸಿದ್ದಾರೆ.

ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು ಹಾಗೂ ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡಬೇಕು. ಕೈಗಳನ್ನು ಸೋಪು ಅಥವಾ ಸ್ಯಾನಿಟೈಜರ್‌ನಿಂದ ಶುಚಿತಗೊಳಿಸಬೇಕು. ತಮ್ಮ ಮನೆಗಳಿಂದ ಮುಸಲ್ಲಾವನ್ನು (ಜಾಯನಮಾಜ್) ಕಡ್ಡಾಯವಾಗಿ ತರಬೇಕು ಹಾಗೂ ಹಸ್ತಲಾಘವ ಮತ್ತು ಆಲಿಂಗನ ಮಾಡಬಾರದು ಎಂದು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.