ADVERTISEMENT

ವಿಜಯಪುರ: ‘ಪೌರಕಾರ್ಮಿಕರಿಂದ ಆರೋಗ್ಯಕರ ಪರಿಸರ ನಿರ್ಮಾಣ’

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 12:54 IST
Last Updated 14 ಸೆಪ್ಟೆಂಬರ್ 2021, 12:54 IST
ವಿಜಯಪುರ ನಗರದ ಭಾರತೀಯ ಜೀವ ವಿಮಾ ನಿಗಮದ ಮುಂಭಾಗದಲ್ಲಿ ಡಿ. ಆರ್. ಮಮದಾಪುರ ಪರಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್  ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ಸನ್ಮಾನಿಸಿದರು
ವಿಜಯಪುರ ನಗರದ ಭಾರತೀಯ ಜೀವ ವಿಮಾ ನಿಗಮದ ಮುಂಭಾಗದಲ್ಲಿ ಡಿ. ಆರ್. ಮಮದಾಪುರ ಪರಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್  ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ಸನ್ಮಾನಿಸಿದರು   

ವಿಜಯಪುರ: ಪೌರಕಾರ್ಮಿಕರಿಗೆ ಸರ್ಕಾರದಿಂದ ಹಾಗೂ ಮಹಾನಗರ ಪಾಲಿಕೆಯಿಂದ ಸಿಗಬಹುದಾದ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಹೇಳಿದರು.

ನಗರದ ಭಾರತೀಯ ಜೀವ ವಿಮಾ ನಿಗಮದ ಮುಂಭಾಗದಲ್ಲಿ ಡಿ. ಆರ್. ಮಮದಾಪುರ ಪರಿವಾರದ ವತಿಯಿಂದ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಜನರು ಆರೋಗ್ಯಕರವಾಗಿರಲು ಪೌರಕಾರ್ಮಿಕರ ಕೊಡುಗೆ ಅಪಾರವಾಗಿದ್ದು ಅಂತಹ ಪೌರಕಾರ್ಮಿಕರಿಗೆ ಸನ್ಮಾನಿಸುತ್ತಿರುವ ಮಮದಾಪುರ ಪರಿವಾರದವರ ಕಾರ್ಯ ಶ್ಲಾಘನೀಯ ಎಂದರು.

ADVERTISEMENT

ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ ಮಾತನಾಡಿ, ನಗರದ ಪೌರಕಾರ್ಮಿಕರಿಗೆ ಸರ್ಕಾರದಿಂದ ಸಿಗುವಂತಹ ಯೋಜನೆಗಳು ಹಾಗೂ ಸೌಲಭ್ಯಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಡಿ.ಆರ್. ಮಮದಾಪುರ್ ಮಾತನಾಡಿ, ಪ್ರತಿನಿತ್ಯ ಎಲ್ಲರ ಮನೆ ಬಾಗಿಲಿಗೆ ಹೋಗಿ, ಕಸ ಸಂಗ್ರಹಿಸಿ ನಗರವನ್ನು ಸ್ವಚ್ಛವಾಗಿರಿಸುತ್ತಿರುವ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ ಎಂದರು.

ಯಾರೂ ಮಾಡದ ಕೆಲಸ ಪೌರಕಾರ್ಮಿಕರು ಮಾಡುತ್ತಾರೆ. ಅವರು ತಮ್ಮ ಕೆಲಸದ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಾರೆ ಎಂದು ತಿಳಿಸಿದರು.

ಅಜಿತ್‌ ದಾಮೋದರ ವಾರಕರಿ, ಬಸವರಾಜ ಆಲೂರು, ಜ್ಯೋತಿ ಮಮದಾಪುರ, ಡಾ. ಪ್ರಭು ಮಮದಾಪುರ ಉಪಸ್ಥಿತರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.