ಸಿಂದಗಿ: ತಾಲ್ಲೂಕಿನ ಬಳಗಾನೂರ ಗ್ರಾಮದ ಬಳಿ ಭಾನುವಾರ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಸಿಂದಗಿ ಸಾರಿಗೆ ಘಟಕಕ್ಕೆ ಸೇರಿದ ಬಸ್ ಬಳಗಾನೂರನಿಂದ ಸಿಂದಗಿ ಕಡೆಗೆ ಬರುವಾಗ ಬಳಗಾನೂರದಿಂದ ಒಂದು ಕಿ.ಮೀ. ದೂರದಲ್ಲಿ ಬಸ್ ಪಲ್ಟಿಯಾಗಿದೆ.
ಬಸ್‌ನಲ್ಲಿ 35 ಪ್ರಯಾಣಿಕರು ಇದ್ದರು. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಪ್ರಯಾಣಿಕರನ್ನು ಹೊರಗೆ ಕರೆ ತಂದರು.ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪ್ರಯಾಣಿಕರು ದೂರಿದ್ದಾರೆ.
ಘಟಕ ವ್ಯವಸ್ಥಾಪಕರ ಸ್ಪಷ್ಟನೆ: ಬಸ್‌ನಲ್ಲಿ 15 ಪ್ರಯಾಣಿಕರಿದ್ದರು. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದುಘಟಕ ವ್ಯವಸ್ಥಾಪಕ ಮದಬಾವಿ ಸ್ಪಷ್ಟನೆ ನೀಡಿದ್ದಾರೆ.
ಘಟನೆಗೆ ಚಾಲಕನ ನಿರ್ಲಕ್ಷ್ಯ ಕಾರಣವಲ್ಲ. ಚಾಲಕ ಸೋಮಜಾಳದ ಮಹಿಬೂಬ ಪಟೇಲ ಅವರಿಗೆ ಒಮ್ಮೆಲೆ ಕಣ್ಣಿಗೆ ಕತ್ತಲು ಬಂದಂತಾಗಿದೆ. ಇದರಿಂದ ನಿಧಾನವಾಗಿ ಚಲಿಸುತ್ತಿದ್ದ ಬಸ್ ಒಡ್ಡಿನ ಬದಿ ಉರುಳಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಬಸ್ ವೇಗದಲ್ಲಿದ್ದರೆ ಭಾರಿ ಅನಾಹುತ ಸಂಭವಿಸುತ್ತಿತ್ತು. ಬಸ್ ಜಖಂಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.