ವಿಜಯಪುರ: ಆಗಸ್ಟ್ 26ರಿಂದ ವಿಜಯಪುರ- ಬಬಲೇಶ್ವರ ಮತ್ತು ಬಬಲೇಶ್ವರ- ವಿಜಯಪುರ ನಡುವೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭವಾಗಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಸೂಚನೆ ಮೇರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಪ್ರತಿದಿನ ಸಾರಿಗೆ ಎರಡು ಬಸ್ಸುಗಳನ್ನು ಈ ಮಾರ್ಗದಲ್ಲಿ ಓಡಿಸಲಿದೆ.
ಒಂದು ಬಸ್ಸು ವಿಜಯಪುರ- ಖತಿಜಾಪುರ- ಸಾರವಾಡ ಮಾರ್ಗವಾಗಿ ಬಬಲೇಶ್ವರಕ್ಕೆ ಸಂಚರಿಸಿದರೆ ಮತ್ತೋಂದು ಬಸ್ಸು ಬಬಲೇಶ್ವರ- ಸಾರವಾಡ- ಖತಿಜಾಪುರ ಮಾರ್ಗವಾಗಿ ವಿಜಯಪುರಕ್ಕೆ ಸಂಚರಿಸಲಿದೆ. ಪ್ರತಿದಿನ ಎರಡೂ ಬಸ್ಸುಗಳು ತಲಾ ಎಂಟು ಬಾರಿ ಈ ಮಾರ್ಗದಲ್ಲಿ ಸಂಚಾರ ನಡೆಸಲಿವೆ.
ಬಬಲೇಶ್ವರ ತಾಲ್ಲೂಕಿನ ಸಾರವಾಡ ಗ್ರಾಮದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ತಮ್ಮ ಶಾಲೆ, ಕಾಲೇಜುಗಳು ಮತ್ತು ದೈನದಿಂದ ಚಟುವಟಿಕೆಗಳ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯ ಬಸ್ಸುಗಳನ್ನು ನಿಲುಗಡೆ ಮಾಡಬೇಕು ಎಂದು ಸಚಿವರಿಗೆ ಮನವಿ ಮಾಡಿದ್ದರು.
ಈ ಬೇಡಿಕೆಗೆ ಸ್ಪಂದಿಸಿದ ಸಚಿವರು ತಕ್ಷಣ ಕ್ರಮ ಕೈಗೊಳ್ಳುವಂತೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚನೆಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ವಿಭಾಗೀಯ ಸಾರಿಗೆ ಅಧಿಕಾರಿಗಳು ಮಂಗಳವಾರದಿಂದಲೇ ನಗರ ಸಾರಿಗೆ ಬಸ್ ಸೇವೆ ಪ್ರಾರಂಭಿಸಿ ಆದೇಶ ಹೊರಡಿಸಿದ್ದಾರೆ.
ಈ ಮಾರ್ಗವಾಗಿ ಸಂಚರಿಸುವ ಇನ್ನುಳಿದ ಬಸ್ಸುಗಳನ್ನು ಸಾರವಾಡ ಗ್ರಾಮದಲ್ಲಿ ನಿಲುಗಡೆ ಮಾಡುವ ನಿಟ್ಟಿನಲ್ಲಿಯೂ ಸೂಕ್ತ ಕ್ರಮ ಕೈಗೊಳ್ಳವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.