ಚಡಚಣ: ರಾಜ್ಯ ಸರ್ಕಾರದ ಬೆಲೆ ಏರಿಕೆ ಹಾಗೂ ತೆರಿಗೆ ಹೆಚ್ಚಳ ನೀತಿ ವಿರೋಧಿಸಿ ಏ.17ರಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ವಿಜಯಪುರದಲ್ಲಿ ಹಮ್ಮಿಕೊಳ್ಳಲಾದ ಜನಾಕ್ರೋಶ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಪಕ್ಷದ ಮುಖಂಡ ಸಂಜೀವ ಐಹೊಳೆ ಕರೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಇದು ಶೂನ್ಯ ಅಭಿವೃದ್ಧಿ ಮತ್ತು ಹಗರಣಗಳ ಸರ್ಕಾರ. ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗೆ ಓಲೈಕೆ, ಹಿಂದೂಗಳ ಕಡೆಗಣನೆ. ಮುಸ್ಲಿಮರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿದ್ದು ಖಂಡನೀಯ’ ಎಂದರು.
ಚಡಚಣ ಮಂಡಲ ಬಿಜೆಪಿ ಅಧ್ಯಕ್ಷ ಕಾಂತುಗೌಡ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೈಚಬಾಳ, ಜಿಲ್ಲಾ ಕಾರ್ಯದರ್ಶಿ ಕೃಷ್ಣಾ ಗುನ್ನಾಳಕರ, ನಾಗಠಾಣ ಮಂಡಳ ಅಧ್ಯಕ್ಷ ಸಿದಗೊಂಡ ಬಿರಾದಾರ, ಶ್ರೀಶೈಲ ಅಂಜುಟಗಿ, ರಾಜು ಕೋಳಿ, ಕೇದಾರಿ ಸಾಳುಂಕೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.