ADVERTISEMENT

ವಿಜಯಪುರ: ಕ್ಯಾಂಪಸ್‌ ಸಂದರ್ಶನ ಜೂ.13 ರಂದು

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 13:09 IST
Last Updated 11 ಜೂನ್ 2025, 13:09 IST
   

ವಿಜಯಪುರ: ನಗರದ ಬಿಎಲ್‌ಡಿಇ ಸಂಸ್ಥೆಯ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ) ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಂಯುಕ್ತಾಶ್ರದಲ್ಲಿ ಜೂ.13 ರಂದು ಶುಕ್ರವಾರ ಕ್ಯಾಂಪಸ್‌ ಸಂದರ್ಶನ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 10ಕ್ಕೆ ಬಿಎಲ್‌ಡಿಇ ಐಟಿಐ ಮತ್ತು ಪಾಲಿಟೆಕ್ನಿಕ್‌ ಕಾಲೇಜಿನ ಆವರಣದಲ್ಲಿ ಬೆಂಗಳೂರಿನ ಕಿರ್ಲೋಸ್ಕರ್‌ ಟೊಯೊಟಾ ಟೆಕ್ಸ್‌ಟೈಲ್ಸ್‌ ಮಷಿನರಿ ಪ್ರೈ.ಲಿ.(ಕೆಟಿಟಿಎಂ) ನವರು ಈ ಕ್ಯಾಂಪಸ್‌ ಸಂದರ್ಶನ ನಡೆಸಲಿದ್ದಾರೆ. 

ಐಟಿಐ ಪಾಸಾದ ಮತ್ತು ಅಂತಿಮ ವರ್ಷದ ಪರೀಕ್ಷೆಗೆ ಹಾಜರಾಗುತ್ತಿರುವ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಈ ಕ್ಯಾಂಪಸ್‌ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 9964658059 ಮತ್ತು 9916853605 ಸಂಪರ್ಕಿಸಬಹುದಾಗಿದೆ ಎಂದು ಐಟಿಟಿ ಕಾಲೇಜಿನ ಪ್ರಾಚಾರ್ಯ ಎಂ.ಡಿ. ಪಡಸಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.