ADVERTISEMENT

ಜಾತಿ ಗಣತಿ | ಮೋದಿ ಮಹತ್ವದ ನಿರ್ಧಾರ: ಎ.ಎಸ್.ಪಾಟೀಲ ನಡಹಳ್ಳಿ

​ಪ್ರಜಾವಾಣಿ ವಾರ್ತೆ
Published 5 ಮೇ 2025, 15:46 IST
Last Updated 5 ಮೇ 2025, 15:46 IST
ಎ.ಎಸ್.ಪಾಟೀಲ್ ನಡಹಳ್ಳಿ
ಎ.ಎಸ್.ಪಾಟೀಲ್ ನಡಹಳ್ಳಿ   

ಮುದ್ದೇಬಿಹಾಳ: ‘ದೇಶದ ಜಾತಿ, ಜನಗಣತಿ ಆಗಬೇಕು ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ’ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಸ್ವಾಗತಿಸಿದ್ದಾರೆ.

ಪಟ್ಟಣದ ದಾಸೋಹ ನಿಲಯದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ನಡೆದಿದ್ದ ಜಾತಿ ಜನಗಣತಿ ಇದುವರೆಗೂ ಆಗಿರಲಿಲ್ಲ.  ಯಾವುದೇ ವರ್ಗಕ್ಕೆ ಅನ್ಯಾಯವಾಗದ ರೀತಿ ಜಾತಿ ಗಣತಿಗೆ ಮುಂದಾಗಲಿದ್ದಾರೆ. ಜಾತಿ ಜನಗಣತಿ ಮಾಡುವ ಅಧಿಕಾರ ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ ಇದ್ದು ರಾಜ್ಯ ಸರ್ಕಾರಕ್ಕೆ ಈ ಅಧಿಕಾರ ಇಲ್ಲ.ಆದರೆ ಸಿಎಂ ಸಿದ್ದರಾಮಯ್ಯ ಸರ್ಕಾರ ಓಟ್ ಬ್ಯಾಂಕ್‌ಗಾಗಿ, ಸ್ವಾರ್ಥಕ್ಕಾಗಿ ಜಾತಿ ಜನಗಣತಿ ಮಾಡಿಸಿದ್ದಾರೆ’ ಎಂದು ಆರೋಪಿಸಿದರು.

‘ದೇಶವನ್ನು 65 ವರ್ಷಗಳ ಕಾಲ ಆಳಿದ ಕಾಂಗ್ರೆಸ್ ಪಕ್ಷ ರಾಜಕೀಯ ಅಸ್ತ್ರವನ್ನಾಗಿ ಜಾತಿ ಗಣತಿಯನ್ನು ಬಳಕೆ ಮಾಡಿಕೊಂಡಿತ್ತು. ಜಾತಿ ಉಪಜಾತಿಗಳ ಸಮೀಕ್ಷೆಯ ನೆಪದಲ್ಲಿ ಹಿಂದೂ ಹಿಂದೂಗಳ ಮಧ್ಯೆ ವ್ಯತ್ಯಾಸವನ್ನು ತಂದಿಟ್ಟು ಸಮಾಜದಲ್ಲಿ ಒಡಕನ್ನುಂಟು ತಂದು ರಾಜಕೀಯ ಕುತಂತ್ರವನ್ನು ಮಾಡಿದೆ’ ಎಂದು ಆರೋಪಿಸಿದರು.

ADVERTISEMENT

‘ಪೆಹಲ್ಗಾಮ್ ಘಟನೆ ಬಳಿಕ ಕಾಶ್ಮೀರದಲ್ಲಿರುವ ಮುಸ್ಲಿಂ ಜನಾಂಗದವರೇ ಕೇಂದ್ರ ಸರ್ಕಾರದ ಬೆಂಬಲಕ್ಕೆ ನಿಂತಿದ್ದು ಉಗ್ರರನ್ನು ಸದೆಬಡೆಯುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಿಎಂ ಸಿದ್ಧರಾಮಯ್ಯ ಯುದ್ಧ ಬೇಡ ಎನ್ನುತ್ತಿದ್ದರೆ ಸಚಿವ ಲಾಡ್,ಬಿ.ಕೆ.ಹರಿಪ್ರಸಾದ ,ಸಚಿವ ತಿಮ್ಮಾಪೂರ ತಮ್ಮದೇ ಧಾಟಿಯಲ್ಲಿ ಈ ದಾಳಿಯ ಕುರಿತು ಮಾತನಾಡಿ ತಮ್ಮ ಸಣ್ಣತವನ್ನು ತೋರಿಸುತ್ತಿದ್ದಾರೆ’ ಎಂದು ನಡಹಳ್ಳಿ ಟೀಕಿಸಿದರು. 
 
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಗಂಗಾಧರ ನಾಡಗೌಡ, ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಸೋಮನಗೌಡ ಬಿರಾದಾರ,ವಕೀಲ ಎಂ.ಆರ್.ಪಾಟೀಲ, ಹಣಮಂತ ನಲವಡೆ, ರಾಜಶೇಖರ ಹೊಳಿ, ಸಂಜೀವ ಬಾಗೇವಾಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.