ADVERTISEMENT

ವಿಜಯಪುರ| ಸಮಾಜ ಒಡೆಯುವ ಕೆಲಸ: ಮನೋಹರ ಐನಾಪುರ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2023, 10:55 IST
Last Updated 26 ಮಾರ್ಚ್ 2023, 10:55 IST
ಮನೋಹರ ಐನಾಪುರ
ಮನೋಹರ ಐನಾಪುರ   

ವಿಜಯಪುರ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ಶಿಫಾರಸಿನಂತೆ ಒಳ ಮೀಸಲಾತಿ ಜಾರಿಗೆ ತಂದಿರುವುದು ಅವೈಜ್ಞಾನಿಕ ಎಂದು ಮಾಜಿ ಶಾಸಕ ಮನೋಹರ ಐನಾಪುರ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಒಳ ಮೀಸಲಾತಿಗೆ ಅವಕಾಶವೇ ಇಲ್ಲ. ಆದರೂ ರಾಜ್ಯ ಬಿಜೆಪಿ ಸರ್ಕಾರ ಒಳಮೀಸಲಾತಿ ಜಾರಿಗೆ ತರುವ ಮೂಲಕ ಸಮಾಜ ಒಡೆಯುವ ಕೆಲಸ ಮಾಡಿದೆ ಎಂದರು.

ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗುತ್ತೇವೆ. ಚುನಾವಣೆ ಲಾಭ ಪಡೆಯಲು ಬಿಜೆಪಿ ಹವಣಿಸಿದೆ. ಇದರಿಂದ ಲಂಬಾಣಿ, ಕೊರಮ, ಕೊರಚ, ಭೋವಿ ಸಮುದಾಯಗಳಿಗೆ ಅನ್ಯಾಯವಾಗಲಿದೆ. ಈ ಚುನಾವಣೆಯಲ್ಲಿ ಬಿಜೆಪಿಗೆ ವೋಟ್ ಹಾಕುವುದಿಲ್ಲ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.