ವಿಜಯಪುರ:ನಗರದಲ್ಲಿರುವ ಬಿಎಸ್‌ಎನ್‌ಎಲ್ ಕಚೇರಿ ಮೇಲೆ ಶುಕ್ರವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿಯಿಂದ ಬಂದಿದ್ದ ಸಿಬಿಐ ಅಧಿಕಾರಿಗಳ ತಂಡ ಸಂಜೆ ದಾಳಿ ನಡೆಸಿದ್ದು, ದಾಖಲೆಪತ್ರಗಳನ್ನು ಪರಿಶೀಲನೆ ನಡೆಸಿದೆ.
ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಯೋಜನೆಯ ಫೈಬರ್ ಕೇಬಲ್ ಅಳವಡಿಕೆ ಕಾಮಗಾರಿಯಲ್ಲಿ ಅಕ್ರಮ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.
ಜಿಲ್ಲೆಯ ಪ್ರತಿ ಗ್ರಾಮ ಪಂಚಾಯ್ತಿಗೆ ಫೈಬರ್ ಕೇಬಲ್ ಅಳವಡಿಸಿದೇ ಹಣ ಕಬಳಿಸಿ, ಅಕ್ರಮ ಎಸಗಿರುವ ಆರೋಪದ ಮೇರೆಗೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಆದರೆ, ಈ ಕುರಿತು ಬಿಎಸ್‌ಎನ್‌ಎಲ್ ಅಧಿಕಾರಿಗಳು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.