ADVERTISEMENT

ಬಸವನಬಾಗೇವಾಡಿ: ಆಪರೇಷನ್ ಸಿಂಧೂರ ಯಶಸ್ಸಿಗೆ ಸಂಭ್ರಮಾಚರಣೆ

​ಪ್ರಜಾವಾಣಿ ವಾರ್ತೆ
Published 7 ಮೇ 2025, 13:41 IST
Last Updated 7 ಮೇ 2025, 13:41 IST
<div class="paragraphs"><p>ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ಬಸವನಬಾಗೇವಾಡಿಯ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು</p></div>

ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ಬಸವನಬಾಗೇವಾಡಿಯ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು

   

ಬಸವನಬಾಗೇವಾಡಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತದ ಸೇನೆ ಕೈಗೊಂಡಿರುವ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆ ಕಾರ್ಯಕರ್ತರು ಬುಧವಾರ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿ, ‘ನಮ್ಮ ಸೈನ್ಯದ ಜೊತೆ ನಾವು ಸದಾ ಇದ್ದೇವೆ. ಈ ಕಾರ್ಯಾಚರಣೆ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ಹೇಳಿದರು.

ADVERTISEMENT

ಮಾಜಿ ಸೈನಿಕರ ಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿ ಆರ್.ಐ. ಬಿರಾದಾರ, ಜಮಾತೆ ಇಸ್ಲಾಂ ಅಧ್ಯಕ್ಷ ಸಲೀಂ ಸಯ್ಯದ್ ಮಾತನಾಡಿದರು.

ಬಸವ ಸೈನ್ಯದ ತಾಲ್ಲೂಕು ಘಟಕದ ಅಧ್ಯಕ್ಷ ಸಂಜು ಬಿರಾದಾರ, ಮುಖಂಡರಾದ ಶ್ರೀಕಾಂತ ಕೊಟ್ರಶೆಟ್ಟಿ, ಮನ್ನಾನ ಶಾಬಾದಿ, ಸುನೀಲ ಚಿಕ್ಕೊಂಡ, ಸಂಗಮೇಶ ಜಾಲಗೇರಿ, ಶಂಕರಗೌಡ ಪಾಟೀಲ, ಶಂಕರ ರಜಪೂತ, ಅಪ್ಪು ಗಬ್ಬೂರ, ಸುರೇಶ ಹೂಗಾರ, ಮಂಜು ಜಾಲಗೇರಿ, ಅರುಣ ಗೊಳಸಂಗಿ, ಸಿದ್ರಾಮ ಪಾತ್ರೋಟಿ, ಸಂಗನಬಸು ಪೂಜಾರಿ, ಬಸವರಾಜ ರೇವಡಿಗಾರ, ನವೀನ ಬೇವನೂರ, ವಿಜಯ ರಘಟಿ, ವೀರೇಶ ಗಬ್ಬೂರ, ಮಹಾದೇವ ನಾಯ್ಕೋಡಿ, ಮಲ್ಲು ಬನಾಸಿ, ಸದಾನಂದ ಸುಲಾಖೆ, ನವೀನ ಬೇವನೂರ, ಇರ್ಫಾನ ಕೊರಬು, ಶಪಿಕ ಹೊಕ್ರಾಣಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.