ವಿಜಯಪುರ:ತಾಳಿಕೋಟೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಸರಗಳ್ಳ, ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸೆಪ್ಟೆಂಬರ್ 1ರಂದು ರೇಣುಕಾ ಪಾಟೀಲ ಎಂಬುವವರು ಯಾದಗಿರಿ ಜಿಲ್ಲೆಯ ದೊರಹಳ್ಳಿಗೆ ತೆರಳಲು ಬಸ್ ಗಾಗಿ ಕಾಯುತ್ತಾ ಕುಳಿತಿದ್ದ ವೇಳೆ ಅವರ ಬಳಿಯೇ ಹೊಂಚುಹಾಕಿ ನಿಂತಿದ್ದ ಕಳ್ಳ ಏಕಾಏಕಿ ಕೊರಳಿಗೆ ಕೈಹಾಕಿ 38 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ.
ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.