ADVERTISEMENT

ದಲಿತ ಸಿ.ಎಂ ಬಿಜೆಪಿಯಿಂದ ಸಾಧ್ಯ: ನಾರಾಯಣಸ್ವಾಮಿ

ಗೋವಿಂದ ಕಾರಜೋಳ ಮುಖ್ಯಮಂತ್ರಿ ಆಗುವ ಅವಕಾಶ ಬರಲಿದೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2022, 19:03 IST
Last Updated 24 ಜುಲೈ 2022, 19:03 IST
ಚಲವಾದಿ ನಾರಾಯಣ ಸ್ವಾಮಿ
ಚಲವಾದಿ ನಾರಾಯಣ ಸ್ವಾಮಿ   

ವಿಜಯಪುರ: ‘ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿ ಆಗಬೇಕು ಎಂದಾದರೆ ಅದು ಬಿಜೆಪಿಯಲ್ಲಿ ಮಾತ್ರ ಸಾಧ್ಯ’ ಎಂದು ವಿಧಾನ ಪರಿಷತ್‌ ಸದಸ್ಯ ಹಾಗೂ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಚಲವಾದಿ ನಾರಾಯಣ ಸ್ವಾಮಿ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಹಿರಿಯ ದಲಿತ ನಾಯಕ ಗೋವಿಂದ ಕಾರಜೋಳ ಅವರನ್ನು ಸಚಿವ ಹಾಗೂ ಉಪ ಮುಖ್ಯಮಂತ್ರಿ ಮಾಡಲಾಗಿದೆ. ಮುಂದೆ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ 36 ವಿಧಾನಸಭಾ ಕ್ಷೇತ್ರಗಳು ಎಸ್‌ಸಿ ಮತ್ತು ಎಸ್‌ಟಿಗೆ ಮೀಸಲಾಗಿವೆ. ಮೀಸಲು ಕ್ಷೇತ್ರಗಳನ್ನು ಹೊರತುಪಡಿಸಿಯೂ ದಲಿತರಿಗೆ ಸ್ಪರ್ಧಿಲು ಬಿಜೆಪಿ ಹೆಚ್ಚಿನ ಅವಕಾಶ ಕಲ್ಪಿಸಲಿದೆ.ಶೇ 70ಕ್ಕಿಂತ ಹೆಚ್ಚು ದಲಿತರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ’ ಎಂದು ಹೇಳಿದರು.

ADVERTISEMENT

‘ಕಾಂಗ್ರೆಸ್‌ ಪಕ್ಷದಲ್ಲಿ ಇಲ್ಲದ ಸ್ಥಾನಕ್ಕೆ ಗುದ್ದಾಟ ನಡೆದಿದೆ. ಒಂದು ಡಜನ್‌ ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ಮುಗಿಬಿದ್ದಿದ್ದಾರೆ. ಆದರೆ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 60–65 ಸ್ಥಾನ ಗೆಲ್ಲುವುದು ಕಷ್ಟ. ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗುವ ಉದ್ದೇಶದಿಂದ ಜನ್ಮದಿನದ ನೆಪದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.