ADVERTISEMENT

ನಾಲತವಾಡಕ್ಕೆ ಮುಖ್ಯಮಂತ್ರಿ ಮಾ.21ಕ್ಕೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2023, 15:47 IST
Last Updated 18 ಮಾರ್ಚ್ 2023, 15:47 IST
ನಾಲತವಾಡದಲ್ಲಿ ನಡೆಯಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮಾತನಾಡಿದರು 
ನಾಲತವಾಡದಲ್ಲಿ ನಡೆಯಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮಾತನಾಡಿದರು    

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾ.21 ರಂದು ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಗ್ರಾಮದಲ್ಲಿ ಜರುಗುವ ಸಾರ್ವಜನಿಕ ಕಾರ್ಯಕ್ರಮದ ವೇದಿಕೆ ನಿಮಾಣ, ಸಾರ್ವಜನಿಕರಿಗೆ ಆಸನ ವ್ಯವಸ್ಥೆ, ಮಧ್ಯಾಹ್ನ ಊಟ, ಕುಡಿಯುವ ನೀರು, ವಿದ್ಯುತ್ ಸಮಸ್ಯೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.

ADVERTISEMENT

ಮುಖ್ಯಮಂತ್ರಿಗಳು ಉದ್ಘಾಟಿಸಲಿರುವ, ಭೂಮಿಪೂಜೆ, ಶಂಕುಸ್ಥಾಪನೆ ನೆರವೇರಿಸಲಿರುವ ಕಾಮಗಾರಿಗಳನ್ನು ಇಲಾಖಾವಾರು, ಕಾಮಗಾರಿ ಪಟ್ಟಿ ಸಿದ್ಧಪಡಿಸಿಟ್ಟುಕೊಳ್ಳಬೇಕು. ಒಂದೇ ವೇದಿಕೆಯಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗಳ, ಭೂಮಿಪೂಜೆ, ಶಂಕುಸ್ಥಾಪನೆ ನೆರವೇರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.