
ಇಂಡಿ: ‘ಆಡುವ ವಯಸ್ಸಿನಲ್ಲಿ ಮಗುವಿಗೆ ಮದುವೆ ಮಾಡಿದರೆ ಮಗುವಿನ ಆರೋಗ್ಯ ಮತ್ತು ಮಾನಸಿಕ ಸ್ವಾಸ್ಥ್ಯ ಜೀವನದ ಮೇಲೆ ಪರಿಣಾಮ ಉಂಟು ಮಾಡುತ್ತದೆ. ಬಾಲ್ಯವಿವಾಹ ಪದ್ಧತಿ ನಾಗರಿಕ ಸಮಾಜಕ್ಕೆ ಅಂಟಿದ ಪಿಡುಗು’ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ನಗರದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಮಂಗಳವಾರ ನಡೆದ ಭಾರತ ಸರ್ಕಾರ ಕೇಂದ್ರ ಸಂವಹನ ಇಲಾಖೆ, ವಿಜಯಪುರ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಶಿಶು ಅಭಿವೃದ್ಧಿ ಯೋಜನೆ, ಆರೋಗ್ಯ ಇಲಾಖೆ ಹಾಗೂ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘ ಇಂಡಿ ಅವರ ಸಂಯುಕ್ತಾಶ್ರಯದಲ್ಲಿ ವಂದೇ ಮಾತರಂನ 150ನೇ ವರ್ಷಾಚರಣೆ, ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ, ವಿಕಸಿತ ಭಾರತ -2047 ಮತ್ತು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳ ಕುರಿತು ಚಿತ್ರ ಪ್ರದರ್ಶನ ಮತ್ತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೀತಾ ಗುತ್ತರಗಿ ಮಠ ಪ್ರಾಸ್ತಾವಿಕ ಮಾತನಾಡಿದರು. ಕೇಂದ್ರ ಸಂವಹನ ಇಲಾಖೆಯ ಅಧಿಕಾರಿ ಸಿ.ಕೆ. ಸುರೇಶ ಸ್ವಾಗತಿಸಿದರು.
ಶ್ರೀ ಶಾಂತೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನೀಲಕಂಠಗೌಡ ಪಾಟೀಲ, ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಯೋಗಪ್ಪ ಚನಗೊಂಡ, ತಾಲ್ಲೂಕು ಪಂಚಾಯಿತಿ ನಂದೀಪ ರಾಠೋಡ, ದತ್ತಾ ಕುಲಕರ್ಣಿ (ಹಿಂಗಣಿ), ಸತೀಶ ಚವ್ಹಾಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.