ADVERTISEMENT

‘ಮಕ್ಕಳನ್ನು ಮೊಬೈಲ್‌ನಿಂದ ದೂರವಿಡಿ’

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 15:45 IST
Last Updated 3 ಜುಲೈ 2025, 15:45 IST
ಇಂಡಿ ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ವೈದ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ವಿಪುಲ್ ಕೋಳೆಕರ ಮಾತನಾಡಿದರು  
ಇಂಡಿ ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ವೈದ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ವಿಪುಲ್ ಕೋಳೆಕರ ಮಾತನಾಡಿದರು     

ಇಂಡಿ: ಎರಡರಿಂದ ಮೂರು ವರ್ಷದ ಮಕ್ಕಳಿಗೆ ಊಟ ಮಾಡಿಸುವಾಗ ತಂದೆ ತಾಯಂದಿರು ಮೊಬೈಲ್ ನೀಡುತ್ತಿದ್ದಾರೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬಿರುತ್ತದೆ ಎಂದು ಸರ್ಕಾರಿ ಆಸ್ಪತ್ರೆಯ ಚಿಕ್ಕ ಮಕ್ಕಳ ತಜ್ಞ ಡಾ. ವಿಪುಲ್ ಕೋಳೆಕರ ಹೇಳಿದರು.

ಅವರು ಗುರುವಾರ ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವೈದ್ಯ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಮಕ್ಕಳಿಗೆ ಆರೋಗ್ಯ, ಸ್ವಚ್ಛತೆ ಹಾಗೂ ದೈನಂದಿನ ಜೀವನಶೈಲಿಗೆ ಸಂಬಂಧಿಸಿದಂತೆ ಅನೇಕ ಉಪಯುಕ್ತ ಸಲಹೆ ಸೂಚನೆಗಳನ್ನು ತಾಯಿ ತಂದೆ ರೂಢಿಸಬೇಕು. ಮಕ್ಕಳಲ್ಲಿ ಆರೋಗ್ಯದ ಬಗ್ಗೆ ಅರಿವು ಹೆಚ್ಚಿಸಬೇಕು ಎಂದರು.

ADVERTISEMENT

ಸ್ತ್ರೀ ರೋಗ ತಜ್ಞ ಡಾ. ಶೀರಿನ ಜಮಾದಾರ ಮಾತನಾಡಿ, ಹೆಣ್ಣುಮಕ್ಕಳ ಆರೋಗ್ಯ ಸಮಸ್ಯೆಗಳ ಕುರಿತು ಮಾಹಿತಿಯನ್ನು ನೀಡುತ್ತ, ಪೋಷಣಾ ತತ್ವಗಳು ಮತ್ತು ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿವರಿಸಿದರು.

ಬಿ.ಎಲ್.ಈ ಸಂಸ್ಥೆಯ ಉಪಾಧ್ಯಕ್ಷ ಹಸನ ಮುಜಾವರ ಮಾತನಾಡಿ, ವೈದ್ಯರನ್ನು ದೇವರ ನಂತರದ ಸ್ಥಾನದಲ್ಲಿ  ಪರಿಗಣಿಸಲಾಗುತ್ತದೆ. ಅವರು ರಕ್ಷಕ ದೇವತೆಗಳು. ಭಾರತದಲ್ಲಿ ಪ್ರತಿ ವರ್ಷ ಜುಲೈ 1 ರಂದು ಅವರ ಕೊಡುಗೆ ಮತ್ತು ಉದಾತ್ತ ಕೆಲಸವನ್ನು ಗೌರವಿಸಲು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ. ನಮ್ಮ ಉತ್ತಮ ಆರೋಗ್ಯ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹಗಲಿರುಳು ಕೆಲಸ ಮಾಡುವ ಎಲ್ಲಾ ವೈದ್ಯರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಈ ದಿನವನ್ನು ಸ್ಮರಿಸಲಾಗುತ್ತದೆ ಎಂದರು.

ಶಾಲೆಯ ಮುಖ್ಯಗುರು ಯಾಸಿನ್ ತುಕರ್ ಅಧ್ಯಕ್ಷತೆ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.