ADVERTISEMENT

ಚಿಮ್ಮಲಗಿ: ಜಾತ್ರೆ, ಅಡ್ಡಪಲ್ಲಕ್ಕಿ ಉತ್ಸವ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2026, 2:21 IST
Last Updated 3 ಫೆಬ್ರುವರಿ 2026, 2:21 IST
ಆಲಮಟ್ಟಿ ಸಮೀಪದ ಚಿಮ್ಮಲಗಿ ಭಾಗ-2 ಗ್ರಾಮದ ಅರಳೆಲೆ ಕಟ್ಟಿಮನಿ ಹಿರೇಮಠದ ಲಿಂ.ನೀಲಕಂಠ ಸ್ವಾಮೀಜಿಯವರ ತೃತೀಯ ಪುಣ್ಯಸ್ಮರಣೆ ಹಾಗೂ ಜಾತ್ರಾ ಮಹೋತ್ಸವವನ್ನು ವಿವಿಧ ಮಠಾಧೀಶರು ಉದ್ಘಾಟಿಸಿದರು
ಆಲಮಟ್ಟಿ ಸಮೀಪದ ಚಿಮ್ಮಲಗಿ ಭಾಗ-2 ಗ್ರಾಮದ ಅರಳೆಲೆ ಕಟ್ಟಿಮನಿ ಹಿರೇಮಠದ ಲಿಂ.ನೀಲಕಂಠ ಸ್ವಾಮೀಜಿಯವರ ತೃತೀಯ ಪುಣ್ಯಸ್ಮರಣೆ ಹಾಗೂ ಜಾತ್ರಾ ಮಹೋತ್ಸವವನ್ನು ವಿವಿಧ ಮಠಾಧೀಶರು ಉದ್ಘಾಟಿಸಿದರು   

ಆಲಮಟ್ಟಿ: ಸಮೀಪದ ಚಿಮ್ಮಲಗಿ ಭಾಗ-2ರ ಅರಳೆಲೆ ಕಟ್ಟಿಮನಿ ಹಿರೇಮಠದ ಲಿಂಗೈಕ್ಯ ನೀಲಕಂಠ ಸ್ವಾಮೀಜಿಗಳ ತೃತೀಯ ಪುಣ್ಯಸ್ಮರಣೆ ನಿಮಿತ್ತ ಗ್ರಾಮದಲ್ಲಿ ಅಡ್ಡಪಲ್ಲಕ್ಕಿ ಉತ್ಸವ, ಧರ್ಮ ಸಭೆ, ಧಾರ್ಮಿಕ ಕಾರ್ಯಕ್ರಮಗಳು, ಜಾತ್ರೆ ಭಾನುವಾರ ಜರುಗಿದವು.

ಧರ್ಮಸಭೆಯಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ, ‘ಹಿಂದೂ ಧರ್ಮ ಜಗತ್ತಿನ ವಿವಿಧ ಧರ್ಮಗಳಿಗೆ ಮಾತೃ ಧರ್ಮವಾಗಿದೆ. ವಿವಿಧತೆಯಲ್ಲಿ ಏಕತೆ ಸಾರುತ್ತದೆ. ಹೀಗಾಗಿ ಈ ಧರ್ಮವನ್ನು ನಾಶ ಮಾಡಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ’ ಎಂದರು.

ಜೆಡಿಎಸ್ ಮುಖಂಡ ಸೋಮನಗೌಡ ಪಾಟೀಲ (ಮನಗೂಳಿ), ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವಾನಂದ ಅವಟಿ, ಸತ್ಯಜೀತ ಪಾಟೀಲ, ಸಹಕಾರ ಮಹಾಮಂಡಳದ ನಿರ್ದೇಶಕ ಐ.ಸಿ. ಪಟ್ಟಣಶೆಟ್ಟಿ, ಚಂದ್ರಶೇಖರಗೌಡ ಪಾಟೀಲ, ತಾನಾಜಿ ನಾಗರಾಳ ಮಾತನಾಡಿದರು.

ADVERTISEMENT

ತಡವಲಗಾದ ಅಭಿನವ ರಾಚೋಟೇಶ್ವರ ಸ್ವಾಮೀಜಿ, ಕನ್ನೂರಿನ ಸೋಮನಾಥ ಸ್ವಾಮೀಜಿ, ಬಸವನಬಾಗೇವಾಡಿಯ ಶಿವಪ್ರಕಾಶ ಸ್ವಾಮೀಜಿ, ಆಲಮೇಲದ ಚಂದ್ರಶೇಖರ ಸ್ವಾಮೀಜಿ, ಗುಂಡಕನಾಳದ ಗುರುಲಿಂಗ ಸ್ವಾಮೀಜಿ, ಇಂಗಳೇಶ್ವರದ ಭೃಂಗೇಶ್ವರಲಿಂಗ ಸ್ವಾಮೀಜಿ ಪಾಲ್ಗೊಂಡಿದ್ದರು.

ಚಿಮ್ಮಲಗಿ ಅರಳೆಲೆ ಕಟ್ಟಿಮನಿ ಹಿರೇಮಠದ ಸಿದ್ಧರೇಣುಕ ಸ್ವಾಮೀಜಿಯವರ ಅಡ್ಡಪಲ್ಲಕ್ಕಿ ಮಹೋತ್ಸವದ ಮೆರವಣಿಗೆ ಗ್ರಾಮದ ತುಂಬ ನಡೆಯಿತು.

ಆಲಮಟ್ಟಿ ಸಮೀಪದ ಚಿಮ್ಮಲಗಿ ಭಾಗ-2 ಗ್ರಾಮದ ಅರಳೆಲೆ ಕಟ್ಟಿಮನಿ ಹಿರೇಮಠದ ಲಿಂ.ನೀಲಕಂಠ ಸ್ವಾಮೀಜಿಗಳ ತೃತೀಯ ಪುಣ್ಯಸ್ಮರಣೆ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ವಿವಿಧ ಮಠಾಧೀಶರು ಉದ್ಘಾಟಿಸಿದರು
ಚಿಮ್ಮಲಗಿ ಅರಳೆಲೆ ಕಟ್ಟಿಮನಿ ಹಿರೇಮಠದ ಸಿದ್ಧರೇಣುಕ ಸ್ವಾಮೀಜಿಗಳ ಅಡ್ಡಪಲ್ಲಕ್ಕಿ ಮಹೋತ್ಸವದ ಮೆರವಣಿಗೆ ಗ್ರಾಮದ ತುಂಬ ಮಹಿಳೆಯರ ಕುಂಭ ಮೇಳದೊಂದಿಗೆ ಜರುಗಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.