ADVERTISEMENT

ಕೇಂದ್ರದ ಅನುದಾನ ಉಲ್ಲೇಖಿಸಿ: ಜಿಗಜಿಣಗಿ

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 13:11 IST
Last Updated 3 ಜೂನ್ 2025, 13:11 IST
ರಮೇಶ ಜಿಗಜಿಣಗಿ
ರಮೇಶ ಜಿಗಜಿಣಗಿ   

ವಿಜಯಪುರ: ‘ಕೇಂದ್ರ ಸರ್ಕಾರ ಪ್ರತಿ ವಿಧಾನಸಭಾ ಕ್ಷೇತ್ರಗಳ ಪ್ರಗತಿಗೆ ಸಿಆರ್‌ಎಫ್ ಅಡಿಯಲ್ಲಿ ₹8 ಕೋಟಿಯಿಂದ ₹10 ಕೋಟಿ ಅನುದಾನ ನೀಡಿದೆ. ಆದರೆ, ಕಾಂಗ್ರೆಸ್ ಶಾಸಕರು ಪ್ರಧಾನಿ ಮೋದಿ ಅವರ ಕೊಡುಗೆಯನ್ನು ಸೌಜನ್ಯಕ್ಕೂ ಹೇಳುತ್ತಿಲ್ಲ, ಭೂಮಿ ಪೂಜೆಯ ಬ್ಯಾನರ್‌ಗಳಲ್ಲಿಯೂ ಅವರ ಭಾವಚಿತ್ರ ಹಾಕುತ್ತಿಲ್ಲ’ ಎಂದು ಸಂಸದ ರಮೇಶ ಜಿಗಜಿಣಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಪ್ರತಿಯೊಂದು ಮತಕ್ಷೇತ್ರ ಪ್ರಗತಿಯಾಗಬೇಕು ಎಂಬುದು ಪ್ರಧಾನಿ ಮೋದಿ ಅವರ ಹೆಬ್ಬಯಕೆ. ಹೀಗಾಗಿ ಪಕ್ಷಬೇಧ ಮಾಡದೇ ಅನುದಾನ ಒದಗಿಸುತ್ತಿದ್ದಾರೆ’ ಎಂದರು.

‘ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಕಾಂಗ್ರೆಸ್ ಜನಪ್ರತಿನಿಧಿಗಳು ಬಿಜೆಪಿ ಜನಪ್ರಿಯತೆಗೆ ಹೆದರುವಂತಾಗಿದೆ. ಕೇಂದ್ರ ಸರ್ಕಾರದ ಸಾಧನೆ, ಯೋಜನೆಗಳನ್ನೇ ತಮ್ಮ ಸಾಧನೆ ಎಂದು ಬಿಂಬಿಸುವ ಮೂಲಕ ಜನರನ್ನು ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ. ಕೂಡಲೇ ಈ ರೀತಿಯ ತಾತ್ಸಾರ ಮನೋಭಾವದಿಂದ ಕಾಂಗ್ರೆಸ್ ಜನಪ್ರತಿನಿಧಿಗಳು ಹೊರಬರಬೇಕು, ಯಾರು ಅಭಿವೃದ್ಧಿಗೆ ಅನುದಾನ ನೀಡಿದ್ದಾರೋ ಅವರ ಹೆಸರನ್ನು ಉಲ್ಲೇಖಿಸಬೇಕು’ ಎಂದು ಜಿಗಜಿಣಗಿ ಪ್ರಕಟಣೆಯಲ್ಲಿ ಕಿವಿ ಮಾತು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.