ವಿಜಯಪುರ: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜಿಐ) ಬಿ.ಆರ್. ಗವಾವಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ ಕಿಶೋರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಒತ್ತಾಯಿಸಿದ್ದಾರೆ.
ನ್ಯಾಯಮೂರ್ತಿ ದಲಿತರೆನ್ನುವ ಭಾವದಿಂದ ಸನಾತನ ಧರ್ಮದ ಹೆಸರಲ್ಲಿ ನ್ಯಾಯಾಲಯಕ್ಕೆ ಅವಮಾನ ಮಾಡಿದ ವಕೀಲರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.