ಮುದ್ದೇಬಿಹಾಳ: ‘ರಸ್ತೆಯಲ್ಲಿ ಬೈಕ್ ತಗುಲಿದ ವಿಚಾರಕ್ಕೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಇಬ್ಬರು ವ್ಯಕ್ತಿಗಳು ಮುಖ್ಯರಸ್ತೆಯಲ್ಲೇ ಹೊಡೆದಾಡಿಕೊಂಡಿರುವ ಘಟನೆ ಪಟ್ಟಣದಲ್ಲಿ ಐಶ್ವರ್ಯಾ ಹೋಟೆಲ್ ಎದುರು ಸೋಮವಾರ ನಡೆದಿದೆ.
ಬೈಕ್ ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸುತ್ತ ಯುವಕ ಕೈಯ್ಯಲ್ಲಿದ್ದ ಬೈಕ್ ಚಾವಿಯಿಂದ ವ್ಯಕ್ತಿಯ ಕಿವಿಗೆ ಚುಚ್ಚಿದ. ಇದರಿಂದ ವ್ಯಕ್ತಿಗೆ ತೀವ್ರ ರಕ್ತಸ್ರಾವವಾಗಿದ್ದು ಹಾಕಿಕೊಂಡಿದ್ದ ಬಟ್ಟೆ ರಕ್ತಸಿಕ್ತವಾಗಿತ್ತು. ಯುವಕನ ತಲೆಗೂ ಪೆಟ್ಟಾಗಿದ್ದು ಇಬ್ಬರೂ ವಾಗ್ವಾದ ನಡೆಸುತ್ತಾ ಮುಖ್ಯರಸ್ತೆಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದರು. ಸಾರ್ವಜನಿಕರು ತಿಳಿಹೇಳಿದರೂ ಜಟಾಪಟಿ ಮುಂದುವರಿಸಿದ್ದರು. ಪೊಲೀಸರು ಸ್ಥಳಕ್ಕೆ ಬಂದು ಯುವಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು.
ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.