ಪ್ರಾತಿನಿಧಿಕ ಚಿತ್ರ
ವಿಜಯಪುರ: ರಾಜ್ಯದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಜನವರಿ 3 ಮತ್ತು 4ರಂದು ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಉಷ್ಣಾಂಶವು ಕನಿಷ್ಠಮಟ್ಟಕ್ಕೆ ಕುಸಿಯುವ ಸಾಧ್ಯತೆ ಇದೆ. ಜೊತೆಗೆ ಶೀತಗಾಳಿ ಬೀಸಲಿದ್ದು, ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣ ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.
ವಿಜಯಪುರ ಜಿಲ್ಲೆಯಲ್ಲಿ ಶುಕ್ರವಾರ 10 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.