ವಿಜಯಪುರ: ‘ಬಚಾವತ್ ಐ ತೀರ್ಪು ಉಲ್ಲಂಘಿಸಿ ಮಹಾರಾಷ್ಟ್ರ ಸರ್ಕಾರ 50 ಟಿಎಂಸಿ ಅಡಿ ನೀರನ್ನು ಅಕ್ರಮವಾಗಿ ಸಂಗ್ರಹಿಸಿ, ಬಳಸಿಕೊಳ್ಳುತ್ತಿರುವುದರ ವಿರುದ್ಧ ಕೇಂದ್ರ ಜಲಶಕ್ತಿ ಸಚಿವಾಲಯದ ಪರಿಶೀಲನಾ ಸಮಿತಿಗೆ ದೂರು ನೀಡಿ, ಕ್ರಮಕ್ಕೆ ಆಗ್ರಹಿಸಲಾಗುವುದು’ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದರು.
‘ಭೀಮಾ, ಸೀನಾ ನದಿಗಳ ವ್ಯಾಪ್ತಿಯಲ್ಲಿ ಮಹಾರಾಷ್ಟ್ರವು ಅತಿಯಾಗಿ ನೀರು ಸಂಗ್ರಹಿಸಿ, ಬಳಸುತ್ತಿರುವ ಕಾರಣ ಕರ್ನಾಟಕಕ್ಕೆ ಅನ್ಯಾಯ ಆಗುತ್ತಿದೆ. ರಾಜ್ಯದ ಕುಡಿಯುವ ನೀರಿನ ಯೋಜನೆ, ನೀರಾವರಿ ಯೋಜನೆಗಳು ನೀರಿನ ಕೊರತೆ ಅನುಭವಿಸುತ್ತಿವೆ’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
‘ಕರ್ನಾಟಕದ ಗಮನಕ್ಕೆ ತಾರದೇ ಮಹಾರಾಷ್ಟ್ರ ತನ್ನ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಭೀಮಾ ಮತ್ತು ಸೀನಾ ನದಿಗಳಿಗೆ ದಿಡೀರ್ ಬಿಡುವುದರಿಂದ ವಿಜಯಪುರ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಲಕ್ಷಾಂತರ ಹೆಕ್ಟೇರ್ ಬೆಳೆ ಹಾನಿ, ಜೀವ ಹಾನಿಗಳು ಉಂಟಾಗುತ್ತಿವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.