ADVERTISEMENT

ಬಿಲ್ಕಿಸ್‌ ಬಾನು ಅತ್ಯಾಚಾರಿಗಳ ಬಿಡುಗಡೆಗೆ ಖಂಡನೆ

ವಿಜಯಪುರ ಜಿಲ್ಲೆಯ ಪ್ರಗತಿಪರ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2022, 13:07 IST
Last Updated 2 ಸೆಪ್ಟೆಂಬರ್ 2022, 13:07 IST
ಗುಜರಾತ್‌ನ ಅತ್ಯಾಚಾರಿಗಳನ್ನು ಬಿಡುಗಡೆಗೊಳಿಸಿರುವುದನ್ನು ಖಂಡಿಸಿ ವಿಜಯಪುರ ಜಿಲ್ಲೆಯ ಪ್ರಗತಿಪರ ಸಂಘಟನೆಗಳ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು
ಗುಜರಾತ್‌ನ ಅತ್ಯಾಚಾರಿಗಳನ್ನು ಬಿಡುಗಡೆಗೊಳಿಸಿರುವುದನ್ನು ಖಂಡಿಸಿ ವಿಜಯಪುರ ಜಿಲ್ಲೆಯ ಪ್ರಗತಿಪರ ಸಂಘಟನೆಗಳ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು   

ವಿಜಯಪುರ: ಗುಜರಾತ್‌ನ ಅತ್ಯಾಚಾರಿಗಳನ್ನು ಬಿಡುಗಡೆಗೊಳಿಸಿರುವುದನ್ನು ಖಂಡಿಸಿ ಜಿಲ್ಲೆಯ ಪ್ರಗತಿಪರ ಸಂಘಟನೆಗಳ ವೇದಿಕೆ ನೇತೃತ್ವದಲ್ಲಿ ನಗರದ ಡಾ.ಬಿ.ಆರ್‌.ಅಂಬೇಡ್ಕರ್ ವೃತ್ತದ ಹತ್ತಿರ ಧರಣಿ ಸತ್ಯಾಗ್ರಹ ನಡೆಸಿ, ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ಸುರೇಖಾ ರಜಪೂತ ಮಾತನಾಡಿ, 2002ರಲ್ಲಿ ಗುಜರಾತ್ ನಲ್ಲಿ ಸಂಘಪರಿವಾರದ ಸಂಘಟನೆಗಳು ವ್ಯವಸ್ಥಿತವಾಗಿ ನಡೆಸಿದ ಕೋಮುಗಲಭೆ, ಸಾವಿರಾರು ಅಮಾಯಕ ಮುಸ್ಲಿಮರ ಮಾರಣಹೋಮದ ಸಂದರ್ಭದಲ್ಲಿ ಬಿಲ್ಕಿಸ್‌ ಬಾನು ಎಂಬ ಐದು ತಿಂಗಳದ ಗರ್ಭಿಣಿಯನ್ನುಸಾಮೂಹಿಕ ಅತ್ಯಾಚಾರ ಮಾಡಿದ ಆರೋಪಿಗಳನ್ನು ಸನ್ನಡತೆ ಮೇಲೆ ಬಿಡುಗಡೆ ಮಾಡಿರುವುದು ಖಂಡನೀಯ ಎಂದರು.

ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 2005ರಲ್ಲಿ ಮುಂಬೈ ಕೋರ್ಟ್‌ 13 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ಜೀವಾವಧಿ ಶಿಕ್ಷೆಗೆ ಒಳಗಾದ ಅತ್ಯಾಚಾರದ ಆರೋಪಿಗಳಿಗೆ ಜಾಮೀನ ಅಥವಾ ನಡೆತೆ ಆಧರಿಸಿ ಬಿಡುಗಡೆ ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್‌ ಆದೇಶವಿದ್ದರೂ ಗುಜರಾತ್ ಸರ್ಕಾರವು ಈ ಎಲ್ಲಾ ಕಾನೂನು ಮತ್ತು ನಿಯಮಗಳನ್ನು ಗಾಳಿಗೆ ತೋರಿ ಅತ್ಯಾಚಾರಿ ಅರೋಪಿಗಳನ್ನು ಬಿಡುಗಡೆ ಮಾಡಿದ್ದು ಖಂಡನಾರ್ಹ. ಈ ಕೂಡಲೇ ಅರೋಪಿಗಳನ್ನು ಬಂಧಿಸಿ ಜೀವಾವಧಿ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ ಮಾತನಾಡಿ, ರಾಜಸ್ಥಾನದಲ್ಲಿ ದಲಿತ ವಿದ್ಯಾರ್ಥಿಯು ಶಾಲೆಯಲ್ಲಿ ನೀರು ಕುಡಿದನೆಂಬ ಕಾರಣದಿಂದ ಶಿಕ್ಷಕನ್ನು ಥಳಿಸಿ ಸಾವಿಗೆ ಕಾರಣವಾಗಿದ್ದಾನೆ. ಆ ಶಿಕ್ಷಕನ್ನು ಕೂಡಲೇ ಬಂಧಿಸಿಬೇಕು ಎಂದು ಆಗ್ರಹಿಸಿದರು.

ಬಸವಾದಿ ಶರಣರ ವಿಚಾರವಾದ ಮತ್ತು ಬಡ ಮಕ್ಕಳಗೆ ಹಲವಾರು ವರ್ಷಗಳಿಂದ ಶಿಕ್ಷಣವನ್ನು ನೀಡುತ್ತಿರುವ ಚಿತ್ರದುರ್ಗಾ ಮುರುಘಾ ಮಠದ ಶರಣರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯನಡೆಸಿದ ಪ್ರಕರಣದ ಸಮುಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಅಪ್ಸರಾಬೇಗಂ ಚಪ್ಪರಬಂದ, ಭಾರತಿ ವಾಲಿ, ಶ್ರೀನಿವಾಸ ಪೂಜಾರಿ, ಲಕ್ಷ್ಮಣ ಹಂದ್ರಾಳ, ಪ್ರಭುಗೌಡ ಪಾಟೀಲ, ಬಾಳು ಜೇವೂರ, ಫಯಾಜ್‌ ಕಲಾದಗಿ, ಸಿದ್ದು ರಾಯಣ್ಣವರ, ಸದಾನಂದ ಮೋದಿ, ಲಾಲಸಾಬ ಕುರುಬರ, ಯುಸೂಫ್‌ ಖಾಜಿ, ಗಂಡೆಪ್ಪಗೋಳ, ಅನುಸೂಯ ರಜಪೂತ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.