ADVERTISEMENT

‘ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ’

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2024, 14:55 IST
Last Updated 10 ಮಾರ್ಚ್ 2024, 14:55 IST
ಹೊರ್ತಿ ಸಮೀಪದ ಝಳಕಿಯ ಗ್ರಾಮ ಪಂಚಾಯಿತಿ ಆವರಣದಲ್ಲಿ ಕಾಂಗ್ರೆಸ್ ಸರ್ಕಾರದ  ಗ್ಯಾರಂಟಿ ಯೋಜನೆಗಳ ಜಾಗೃತಿ ಮೂಡಿಸುವ ವಾಹನಕ್ಕೆ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಚಾಲನೆ ನೀಡಿದರು
ಹೊರ್ತಿ ಸಮೀಪದ ಝಳಕಿಯ ಗ್ರಾಮ ಪಂಚಾಯಿತಿ ಆವರಣದಲ್ಲಿ ಕಾಂಗ್ರೆಸ್ ಸರ್ಕಾರದ  ಗ್ಯಾರಂಟಿ ಯೋಜನೆಗಳ ಜಾಗೃತಿ ಮೂಡಿಸುವ ವಾಹನಕ್ಕೆ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಚಾಲನೆ ನೀಡಿದರು   

ಹೊರ್ತಿ: ‘ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೆ ತಂದು ನುಡಿದಂತೆ ನಡೆದಿದೆ’ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.

ಸಮೀಪದ ಝಳಕಿಯ ಗ್ರಾಮ ಪಂಚಾಯಿತಿ ಆವರಣದಲ್ಲಿ ಭಾನುವಾರ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾಗೃತಿ ಮೂಡಿಸುವ ವಾಹನದ ಎಲ್.ಇ.ಡಿ ಮುಖಾಂತರ ಕಿರು ಮಾಹಿತಿ ಚಿತ್ರಣ ನೀಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಲು, ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ  ಗ್ಯಾರಂಟಿ ಯೋಜನೆಗಳ ಮಾಹಿತಿ ನೀಡಲು ವಾಹನದ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದರು.

ADVERTISEMENT

ವಿಜಯಪುರ ಎಸ್.ಟಿ ಜಿಲ್ಲಾ ಘಟಕದ ಅಧ್ಯಕ್ಷ ಸಣ್ಣಪ್ಪ ತಳವಾರ, ಬಳ್ಳೊಳ್ಳಿ ಬ್ಲಾಕ್ ಅಧ್ಯಕ್ಷ ಸತೀಶ ಹತ್ತಿ, ಸಂತೋಷ ಪಾಟೀಲ, ದಯಾನಂದ ಪಾಟೀಲ, ಸಂತೋಷ ಪವಾರ, ಶಂಕರಗೌಡ ಬಿರಾದಾರ, ಮುದಕಣ್ಣ ತಳವಾರ, ಉಮೇಶ, ಅಶೋಕ, ಹಾಗೂ ಇನ್ನಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.