ADVERTISEMENT

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 7:13 IST
Last Updated 29 ಜೂನ್ 2020, 7:13 IST
ಕಾಂಗ್ರೆಸ್ ಪ್ರತಿಭಟನೆ
ಕಾಂಗ್ರೆಸ್ ಪ್ರತಿಭಟನೆ   

ವಿಜಯಪುರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರದ ವಿರುದ್ಧ ಮತ್ತು ಪ್ರಧಾನಿ ವಿರುದ್ಧ ಘೋಷಣೆ ಕೂಗಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ರಾಜು ಅಲಗೂರ ಮಾತನಾಡಿ, ಬೆಲೆ ಏರಿಕೆ ಪರಿಣಾಮ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಒಂದೇ ಆಗಿರುವುದು ವಿಪರ್ಯಾಸ, ಜನ ಸಾಮಾನ್ಯರ ಪರಿಸ್ಥಿತಿ ಶೋಚನೀಯ ವಾಗಿದೆ. ಪ್ರಧಾನಿ ಮೋದಿ ಅವರ ಆರ್ಥಿಕ, ವಿದೇಶಾಂಗ ನೀತಿ ಹದಗೆಟ್ಟುಹೋಗಿದೆ ಎಂದು ಆರೋಪಿಸಿದರು.

ತೈಲ ಬೆಲೆ ಏರಿಕೆ ತಡೆಯಬೇಕು, ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಬೇಕು ಎಂದು ಒತ್ತಾಯಿಸಿದರು. ಮುಖಂಡರಾದ
ವೈಜನಾಥ ಕರ್ಪೂರ ಮಠ, ಅಬ್ದುಲ್ ಹಮೀದ್ ಮುಶ್ರಫ್, ವಿದ್ಯಾರಾಣಿ ತುಂಗಳ, ವಿಠಲ್ ಕೋಳೂರ, ಎಸ್.ಎಂ.ಪಾಟೀಲ ಗಣಿಯಾರ, ಮುಹಮ್ಮದ್ ಪಾಟೀಲ ಗಣಿಯಾರ ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT