ADVERTISEMENT

ವಿಜಯಪುರ: ಗುಂಡಿಬಿದ್ದ ರಸ್ತೆಗೆ ಗರಸು ಹಾಕಿ ಪ್ರತಿಭಟನೆ

ಕಾಂಗ್ರೆಸ್‌ ಮುಖಂಡರಿಂದ ವಿನೂತನ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 12:41 IST
Last Updated 23 ಸೆಪ್ಟೆಂಬರ್ 2020, 12:41 IST
ವಿಜಯಪುರ ನಗರದ ರಸ್ತೆಗಳಲ್ಲಿ ಬಿದ್ದಿರುವ ಗುಂಡಿ, ತೆಗ್ಗುಗಳಿಗೆ ಗರಸು ತುಂಬುವ ಮೂಲಕ ಕಾಂಗ್ರೆಸ್‌ ಮುಖಂಡರು ಬುಧವಾರ ಪ್ರತಿಭಟನೆ ನಡೆಸಿದರು 
ವಿಜಯಪುರ ನಗರದ ರಸ್ತೆಗಳಲ್ಲಿ ಬಿದ್ದಿರುವ ಗುಂಡಿ, ತೆಗ್ಗುಗಳಿಗೆ ಗರಸು ತುಂಬುವ ಮೂಲಕ ಕಾಂಗ್ರೆಸ್‌ ಮುಖಂಡರು ಬುಧವಾರ ಪ್ರತಿಭಟನೆ ನಡೆಸಿದರು    

ವಿಜಯಪುರ: ನಗರದ ರಸ್ತೆಗಳಲ್ಲಿ ಬಿದ್ದಿರುವ ಗುಂಡಿ, ತೆಗ್ಗುಗಳಿಗೆ ಗರಸು ತುಂಬುವ ಮೂಲಕ ಕಾಂಗ್ರೆಸ್‌ ಮುಖಂಡರು ಬುಧವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಮುಖಂಡ ಅಬ್ದುಲ್‍ ಹಮೀದ್ ಮುಶ್ರಿಫ್‌ಮಾತನಾಡಿ, ಗುಂಡಿ ಬಿದ್ದಿರುವ ನಗರ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ಆಗ್ರಹಿಸಿವಿವಿಧ ಸಂಘ-ಸಂಸ್ಥೆಗಳು ಹಾಗೂ ಕಾಂಗ್ರೆಸ್‍ ಪಕ್ಷದಿಂದ ನಗರದಲ್ಲಿ ಹಲವು ಬಾರಿ ಮನವಿ ಸಲ್ಲಿಸಿದರು ಪಾಲಿಕೆ ಅಧಿಕಾರಿಗಳು ಹಾಗೂ ಶಾಸಕರು ಸ್ಪಂದಿಸದೇ ಇರುವುದು ಖಂಡನೀಯ ಎಂದರು.

ಮಳೆ ನೀರು ನಿಂತದೊಡ್ಡ, ದೊಡ್ಡ ತೆಗ್ಗುಗಳಲ್ಲಿ ಬೈಕ್ ಹಾಗೂ ಕಾರು ಇನ್ನಿತರ ವಾಹನ ಸವಾರರು ಬಿದ್ದು ಅಪಾಯ ಮಾಡಿಕೊಂಡಿದ್ದಾರೆ. ನಗರದ ಜನತೆ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ADVERTISEMENT

ಪಾಲಿಕೆ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಎಚ್ಚೆತ್ತುಕೊಂಡು ರಸ್ತೆ ನಿರ್ಮಾಣ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಮುಶ್ರೀಫ್ ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ,ಮುಖಂಡರಾದ ಜಮೀರ್‌ ಅಹ್ಮದ ಬಕ್ಷಿ, ಆರತಿ ಶಹಾಪುರ, ಇರ್ಪಾನ್‌ ಶೇಖ್‌, ಮಹಮ್ಮದ ರಫಿಕ್ ಟಪಾಲ್, ಗಂಗಾಧರ ಸಂಬಣ್ಣಿ, ಅಬ್ದುಲ್‍ಖಾದರ್‌ ಖಾದೀಮ, ಸಜ್ಜಾದೆಪಿರಾ ಮುಶ್ರಿಫ, ವಸಂತ ಹೊನಮೊಡೆ, ಜಯಶ್ರೀ ಭಾರತೆ, ಮಂಜುಳಾ ಜಾಧವ, ಮಂಜುಳಾ ಗಾಯಕವಾಡ, ಅಲ್ತಾಫ ಅಸ್ಕಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.