
ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ‘ಸಿದ್ದರಾಮಯ್ಯ ಕೇವಲ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯಲ್ಲ, ಅವರು ಈಗ ರಾಜ್ಯದ ಮುಖ್ಯಮಂತ್ರಿ, ನನ್ನ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಂದಾಗ ಅವರಿಗೆ ಗೌರವ ಸಲ್ಲಿಸುವುದು ಕ್ಷೇತ್ರದ ಶಾಸಕನಾದ ನನ್ನ ಕರ್ತವ್ಯ. ಹೀಗಾಗಿ ನಾನು ಗೌರವ ಸಲ್ಲಿಸಿದ್ದೇನೆ. ಇದಕ್ಕೆ ಕೆಲವರಿಗೆ ನೋವಾದರೆ ನಾನೇನು ಮಾಡಲಾಗದು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಸಿದ್ದರಾಮಯ್ಯ ಅವರಿಗೆ ಗೌರವ ನೀಡಿದಂತೆ ಕಾಂಗ್ರೆಸ್‌ನವರು ಸಹ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಗೌರವ ನೀಡುವುದನ್ನು ಕಲಿಯಲಿ’ ಎಂದರು.
‘ವಿಜಯಪುರದಲ್ಲಿ ನಡೆದ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಕ್ಷೇತ್ರದ ಜನರು ನನ್ನನ್ನು ಬೆಂಬಲಿಸಿ ಕೂಗು, ಸಿಳ್ಳೆ ಹಾಕಿ ನನ್ನ ಮೇಲಿರುವ ಅಭಿಮಾನ ವ್ಯಕ್ತಪಡಿಸಿದ್ದಾರೆ. ಜನರ ಪ್ರೀತಿ, ವಿಶ್ವಾಸಕ್ಕೆ ನಾನು ಧನ್ಯವಾದ ಸಲ್ಲಿಸುತ್ತೇನೆ’ ಎಂದು ಹೇಳಿದರು.
‘ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಎದುರೇ ವಿಜಯಪುರ ಜನರು ನನ್ನ ಪರ ಕೂಗಿರುವುದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.