ತಾಳಿಕೋಟೆ: ಇಲ್ಲಿನ ಎ.ಕೆ.ಪದವಿ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗ, ಚುನಾವಣಾ ಸಾಕ್ಷರತಾ ಕೂಟ ಮತ್ತು ಮಾನವ ಹಕ್ಕುಗಳ ಸಂರಕ್ಷಣಾ ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಸಂವಿಧಾನ ದಿನವನ್ನು ಆಚರಣೆ ಮಾಡಲಾಯಿತು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಅಜೇಯ ಅಬ್ಬಾರ ಪ್ರಾಸ್ತಾವಿಕವಾಗಿ ಮಾತನಾಡಿ, ಸಂವಿಧಾನದ ಮಹತ್ವ ತಿಳಿಸಿದರು. ಉಪನ್ಯಾಸಕಿ ಲಲಿತಾ ಗೌಡರ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಅನೀಲಕುಮಾರ ಆಲಾಳಮಠ, ಯು.ಎ.ಖಾಜಿ, ಸ್ನೇಹಾ ನಾವದಗಿ, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ತಾಳಿಕೋಟೆ ತಾಲ್ಲೂಕಿನ ವಿವಿಧ ಶಾಲೆ-ಕಾಲೇಜುಗಳಲ್ಲಿ ಸಂವಿಧಾನ ದಿನವನ್ನು ಆಚರಣೆ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.