ADVERTISEMENT

₹1 ಕೋಟಿ ವೆಚ್ಚದಲ್ಲಿ ಪಾದಚಾರಿ ಮಾರ್ಗ ನಿರ್ಮಾಣ: ಶಾಂತವೀರ ಮನಗೂಳಿ

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 15:01 IST
Last Updated 3 ಜೂನ್ 2025, 15:01 IST
ಸಿಂದಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಾದಚಾರಿ ಮಾರ್ಗದ ಕಾಮಗಾರಿಗೆ ಪುರಸಭೆ ಅಧ್ಯಕ್ಷ ಶಾಂತವೀರ ಮನಗೂಳಿ ಅವರು ಮಂಗಳವಾರ ಭೂಮಿಪೂಜೆ ನೆರವೇರಿಸಿದರು
ಸಿಂದಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಾದಚಾರಿ ಮಾರ್ಗದ ಕಾಮಗಾರಿಗೆ ಪುರಸಭೆ ಅಧ್ಯಕ್ಷ ಶಾಂತವೀರ ಮನಗೂಳಿ ಅವರು ಮಂಗಳವಾರ ಭೂಮಿಪೂಜೆ ನೆರವೇರಿಸಿದರು   

ಸಿಂದಗಿ: ರಾಜ್ಯ ಹಣಕಾಸು ಆಯೋಗದ ವಿಶೇಷ ಅನುದಾನದಡಿ ₹1 ಕೋಟಿ ವೆಚ್ಚದಲ್ಲಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪಾದರಿ ಮಾರ್ಗ ಕಾಮಗಾರಿ ನಡೆಯಲಿದೆ ಎಂದು ಪುರಸಭೆ ಅಧ್ಯಕ್ಷ ಶಾಂತವೀರ ಮನಗೂಳಿ ಹೇಳಿದರು.

ಇಲ್ಲಿಯ ಬಸವೇಶ್ವರ ವೃತ್ತದಲ್ಲಿ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ರಸ್ತೆ ವಿಸ್ತರಣೆಗೊಂಡ ಬಸವೇಶ್ವರ ವೃತದಿಂದ ಅಂಬೇಡ್ಕರ್ ವೃತ್ತದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಪಾದಚಾರಿ ಮಾರ್ಗಕ್ಕೆ ಫೇವರ್ಸ್ ಹಾಗೂ ಗ್ರಿಲ್ ಅಳವಡಿಸಲಾಗುವುದು’ ಎಂದು ಅವರು ತಿಳಿಸಿದರು.

ADVERTISEMENT

ಪುರಸಭೆ ಮುಖ್ಯಾಧಿಕಾರಿ ರಾಜಶೇಖರ ಎಸ್., ಸದಸ್ಯರಾದ ಹಣಮಂತ ಸುಣಗಾರ, ಗೊಲ್ಲಾಳಪ್ಪ ಬಂಕಲಗಿ, ಸಾಯಬಣ್ಣ ಪುರದಾಳ, ಸಿದ್ದು ಮಲ್ಲೇದ, ಚೆನ್ನಪ್ಪ ಗೋಣಿ, ಶರಣಪ್ಪ ಸುಲ್ಪಿ, ಪುರಸಭೆ ಕಾರ್ಯಾಲಯದ ದಯಾನಂದ ಇವಣಿ, ಸಿದ್ದು ಅಂಗಡಿ, ಜೆಇ ಸಚಿನ್ ಮೋಟಗಿ ಪಾಲ್ಗೊಂಡಿದ್ದರು.

ಸಿಂದಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಂಗಳವಾರ ಸಂಜೆ ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಅವರು ಫೂಟ್ಪಾತ್ ಕಾಮಗಾರಿ ಭೂಮಿಪೂಜೆ ನೆರವೇರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.