ADVERTISEMENT

‘ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮುಂದುವರಿಕೆ’

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 14:15 IST
Last Updated 28 ಜುಲೈ 2020, 14:15 IST
ವೈ.ಎಸ್. ಪಾಟೀಲ್
ವೈ.ಎಸ್. ಪಾಟೀಲ್   

ವಿಜಯಪುರ: ಕೋವಿಡ್‌ ಪತ್ತೆ ಸಂಬಂಧ ಜೆಲ್ಲೆಯಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್‌ ಅನ್ನು ಮೂರ್ನಾಲ್ಕು ದಿನ ಮುಂದುವರೆಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಈಗಾಗಲೇ ಎಲ್ಲ ತಾಲ್ಲೂಕು ಹಾಗೂ ನಗರಗಳಿಗೆ ಗುರಿ ನಿಗದಿಪಡಿಸಲಾಗಿದೆ ಎಂದರು.

ಹೆಚ್ಚಿನ ಪ್ರಮಾಣದಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮಾಡಲಾಗುತ್ತಿದ್ದು, ಪರೀಕ್ಷೆಯಲ್ಲಿ ಪಾಸಿಟಿವ್‌ ವರದಿ ಬಂದಲ್ಲಿ ಆರ್‌ಟಿಪಿಸಿಆರ್ ಮೂಲಕ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್‌ನಲ್ಲಿ ಎಲ್ಲ ಪ್ರಾಥಮಿಕ ಸಂಪರ್ಕದ ಲಕ್ಷಣವುಳ್ಳವರನ್ನು ಹಾಗೂ ಲಕ್ಷಣವುಳ್ಳದವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅದರಂತೆ ಸೋಮವಾರದ ವರೆಗೆ ಸುಮಾರು ಎರಡು ಸಾವಿರರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮಾಡಲಾಗಿದೆ ಎಂದು ತಿಳಿಸಿದರು.

ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಪೈಕಿ ಬಿಎಲ್‍ಡಿಇ ಮತ್ತು ಸರ್ಕಾರಿ ಲ್ಯಾಬ್‍ಗಳಲ್ಲಿ 140 ಜನರಿಗೆ ಕೋವಿಡ್‌ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.