ADVERTISEMENT

ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ: ಜೊಲ್ಲೆ

ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 13 ಮೇ 2021, 13:37 IST
Last Updated 13 ಮೇ 2021, 13:37 IST
ವಿಜಯಪುರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸಚಿವೆ ಶಶಿಕಲಾ ಜೊಲ್ಲೆ ಗುರುವಾರ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು
ವಿಜಯಪುರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸಚಿವೆ ಶಶಿಕಲಾ ಜೊಲ್ಲೆ ಗುರುವಾರ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು   

ವಿಜಯಪುರ: ನಗರದಲ್ಲಿ ಪ್ರಥಮ ಹಂತದ ಕಾಮಗಾರಿ ಪೂರ್ಣಗೊಂಡಿರುವ ಸರ್ಕಾರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಶಿಕಲಾ ಜೊಲ್ಲೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

ಸರ್ಕಾರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸುವ ಉದ್ದೇಶ ಹೊಂದಲಾಗಿದೆ ಎಂದರು.

100 ಹಾಸಿಗೆಗಳ ಆಸ್ಪತ್ರೆ ಇದಾಗಿದ್ದು, ಹೆಚ್ಚುವರಿ ಬೆಡ್‌ಗಳ ವ್ಯವಸ್ಥೆಯೂ ಸಹ ಇದ್ದು, ಮೂಲಸೌಕರ್ಯ ಸೇರಿದಂತೆ ಮಾನವ ಸಂಪನ್ಮೂಲ ಬಳಕೆಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ADVERTISEMENT

ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ, ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಜಿಲ್ಲಾ ಆಸ್ಪತ್ರೆ ಸರ್ಜನ್ ಡಾ. ಶರಣಪ್ಪ ಕಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಂದ್ರ ಕಾಪ್ಸೆ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ. ನಾಗರಬೆಟ್ಟ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.