ವಿಜಯಪುರ: ಜಿಲ್ಲೆಗೆ ಮಹಾರಾಷ್ಟ್ರದಿಂದ ಬಂದಿರುವ ನಾಲ್ಕು ಜನರಲ್ಲಿ ಶುಕ್ರವಾರ ಕೋವಿಡ್-19 ಸೋಂಕು ದೃಢಪಟ್ಟಿದೆ.
ಮೂರು ವರ್ಷದ ಬಾಲಕ ಸೇರಿದಂತೆ 26, 28 ಮತ್ತು 30 ವರ್ಷ ವಯಸ್ಸಿನ ಮೂವರಿಗೆ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್–19 ಸೋಂಕು ತಗುಲಿದವರ ಸಂಖ್ಯೆ 85ಕ್ಕೆ ಏರಿಕೆಯಾಗಿದೆ. ಈಗಾಗಲೇ ಐವರು ಸಾವನ್ನಪ್ಪಿದ್ದು, 53 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 27 ಸೋಂಕಿತರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.