ADVERTISEMENT

ವಿಜಯಪುರ: ಒಂದೇ ದಿನ 53 ಜನರಲ್ಲಿ ಕೊರೊನಾ ಸೋಂಕು ಪತ್ತೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2020, 14:08 IST
Last Updated 5 ಜೂನ್ 2020, 14:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ 53 ಜನರಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಆತಂಕ ಮೂಡಿಸಿದೆ.

ವಿಜಯಪುರ ನಗರದ ಕಂಟೈನ್ಮೆಂಟ್‌ ಜೋನ್‌ ಸಂಪರ್ಕದಿಂದ 14 ಜನರಿಗೆ ಹಾಗೂ ಇನ್ನುಳಿದ 39 ಜನರಿಗೆ ಮಹಾರಾಷ್ಟ್ರದ ಮುಂಬೈ ಸಂಪರ್ಕದಿಂದ ಸೋಂಕು ತಗುಲಿದೆ. ಇದರಲ್ಲಿ ನಾಲ್ವರು ಬಾಲಕಿಯರು ಮತ್ತು ಇಬ್ಬರು ಬಾಲಕರು ಸೇರಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 187ಕ್ಕೆ ಏರಿಕೆಯಾಗಿದೆ. ಈಗಾಗಲೇ 5 ಜನ ಕೋವಿಡ್‌ ಸೋಂಕಿನಿಂದ ಸಾವಿಗೀಡಾಗಿದ್ದಾರೆ. 65 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ..

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.