ADVERTISEMENT

ವಿಜಯಪುರ ಜಿಪಂ ಸಿಇಒ ಗೋವಿಂದ ರೆಡ್ಡಿಗೆ ಕೋವಿಡ್ ಪಾಸಿಟಿವ್‌

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 15:32 IST
Last Updated 25 ಸೆಪ್ಟೆಂಬರ್ 2020, 15:32 IST
ಗೋವಿಂದ ರೆಡ್ಡಿ
ಗೋವಿಂದ ರೆಡ್ಡಿ   

ವಿಜಯಪುರ: ಜಿಲ್ಲಾ ಪಂಚಾಯ್ತಿಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಅಲ್ಪ ಜ್ವರ ಮತ್ತು ಶೀತದಿಂದ ಬಳಲುತ್ತಿರುವ ಅವರು ವೈದ್ಯಕೀಯ ಪರೀಕ್ಷೆಗೆ ಒಳಗಾಗಿ, ಕೋವಿಡ್ ಪಾಸಿಟಿವ್ ಇರುವ ಬಗ್ಗೆ ದೃಢಪಟ್ಟಿದೆ. ರಕ್ತ ಮತ್ತು ಸಿಟಿ ಸ್ಕ್ಯಾನ್ ವರದಿ ಸಾಮಾನ್ಯವಾಗಿದೆ.

ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ಸಲಹೆ ಮೇರೆಗೆ ಹೋಂ ಐಸೊಲೇಷನ್‌ನಲ್ಲಿ ಇದ್ದಾರೆ.

ADVERTISEMENT

‘ಕೋವಿಡ್‌ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ತಕ್ಷಣ ವೈದ್ಯಕೀಯ ಪರೀಕ್ಷೆಗೆ ಒಳಗಾಗಿ’ ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.