ADVERTISEMENT

ವಿಜಯಪುರ: ಕೋವಿಡ್‌ ಲಕ್ಷ ಲಸಿಕಾ ಮೇಳ

ಒಂದು ಲಕ್ಷ ಜನರಿಗೆ ಲಸಿಕೆ ಹಾಕುಲು ಜಿಲ್ಲಾಡಳಿತ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2021, 11:41 IST
Last Updated 15 ಸೆಪ್ಟೆಂಬರ್ 2021, 11:41 IST
ವಿಜಯಪುರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಧಿಕಾರಿಗಳೊಂದಿಗೆ ನಡೆದ ವಿಡಿಯೊ ಸಂವಾದದಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ್ ಯರಗಲ್, ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ ಇದ್ದಾರೆ
ವಿಜಯಪುರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಧಿಕಾರಿಗಳೊಂದಿಗೆ ನಡೆದ ವಿಡಿಯೊ ಸಂವಾದದಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ್ ಯರಗಲ್, ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ ಇದ್ದಾರೆ   

ವಿಜಯಪುರ: ಸೆಪ್ಟೆಂಬರ್‌ 17ರಂದು ಒಂದು ಲಕ್ಷ ಜನರಿಗೆ ಲಸಿಕೆ ನೀಡುವ ಲಕ್ಷ ಲಸಿಕಾ ಮೇಳ ಯಶಸ್ವಿಯಾಗಲು ಅಗತ್ಯ ಕ್ರಮಕೈಗೊಳ್ಳುವಂತೆಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಧಿಕಾರಿಗಳೊಂದಿಗೆ ನಡೆದ ವಿಡಿಯೊ ಸಂವಾದದಲ್ಲಿ ಅವರುಮಾತನಾಡಿದರು.

ಸಂಬಂಧಪಟ್ಟ ಅಧಿಕಾರಿಗಳು ಮನೆಮನೆಗೆ ತೆರಳಿ ಜನರನ್ನು ಲಸಿಕೆ ಕೊಡುವ ಕೇಂದ್ರಗಳಿಗೆ ಕರೆದುಕೊಂಡು ಬರುವ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.

ADVERTISEMENT

ವಾಹನದ ವ್ಯವಸ್ಥೆ, ಲಸಿಕಾ ಕೇಂದ್ರಗಳ ವ್ಯವಸ್ಥೆ, ಸಿಬ್ಬಂದಿ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಸಂಬಂಧಪಟ್ಟ ಅಧಿಕಾರಿಗಳು ಮುಂಚಿತವಾಗಿ ಸನ್ನದ್ಧ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಪ್ರತಿ ಪಂಚಾಯಿತಿಗಳಲ್ಲಿ ಸಭೆ ನಡೆಸಿ ಲಸಿಕೆ ಪಡೆದವರ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸಭೆಗಳನ್ನು ನಡೆಸಿ ಲಸಿಕೆ ಪಡೆಯದವರ ಮಾಹಿತಿಯನ್ನು ಪಡೆದು ಲಸಿಕೆ ಹಾಕಿಕೊಳ್ಳುವಂತೆ ಮನೆ ಮನೆಗೆ ತೆರಳಿ ತಿಳಿ ಹೇಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಲಕ್ಷ ಲಸಿಕಾ ಮೇಳಕ್ಕೆ ಸಂಬಂಧಪಟ್ಟ ಎಲ್ಲ ಇಲಾಖೆಗಳು ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತ ವಿಜಯ್‌ ಮೆಕ್ಕಳಕಿ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ್ ಕಳಸದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ್ ಯರಗಲ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಕವಿತಾ, ಡಾ. ನಾಗರಬೆಟ್ಟ ಹಾಗೂ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.