ADVERTISEMENT

ಕೋವಿಡ್‌ ಲಸಿಕೆ; ಆರೋಗ್ಯ ಸಿಬ್ಬಂದಿಗೆ ಮೊದಲ ಆದ್ಯತೆ

ಪೂರ್ವ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 10:50 IST
Last Updated 3 ನವೆಂಬರ್ 2020, 10:50 IST
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೋವಿಡ್-19 ಲಸಿಕಾ ಕಾರ್ಯಪಡೆ ಸಭೆಯಲ್ಲಿ ಡಿಎಚ್‌ಒ ಡಾ. ಮಹೇಂದ್ರ ಕಾಪಸೆ ಮಾತನಾಡಿದರು. ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌, ಜಿ.ಪಂ. ಸಿಇಒ ಗೋವಿಂದ ರೆಡ್ಡಿ ಇದ್ದಾರೆ
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೋವಿಡ್-19 ಲಸಿಕಾ ಕಾರ್ಯಪಡೆ ಸಭೆಯಲ್ಲಿ ಡಿಎಚ್‌ಒ ಡಾ. ಮಹೇಂದ್ರ ಕಾಪಸೆ ಮಾತನಾಡಿದರು. ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌, ಜಿ.ಪಂ. ಸಿಇಒ ಗೋವಿಂದ ರೆಡ್ಡಿ ಇದ್ದಾರೆ   

ವಿಜಯಪುರ: ಭವಿಷ್ಯದಲ್ಲಿ ಲಭ್ಯವಾಗಲಿರುವ ಕೋವಿಡ್-19 ಲಸಿಕೆಯನ್ನು ಕೇಂದ್ರ ಸರ್ಕಾರದ ನಿರ್ದೇಶನದಂತೆ ಮೊದಲ ಹಂತವಾಗಿ ನೀಡಬೇಕಾದ ಕೊರೊನಾ ವಾರಿಯರ್ಸ್‌ಗಳ ಮಾಹಿತಿ ಮತ್ತು ಯೋಜನೆ ರೂಪಿಸುವ ಬಗ್ಗೆ ಅವಶ್ಯಕ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೋವಿಡ್-19 ಲಸಿಕಾ ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ವೈದ್ಯರು, ದಾದಿಯರು, ಅರೆವೈದ್ಯರು, ಸಹಾಯಕ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರು ಸೇರಿದಂತೆ ಕೋವಿಡ್‌ ವಾರಿಯರ್ಸ್‌ಗಳು ಲಸಿಕೆಯ ಮೊದಲ ಫಲಾನುಭವಿಗಳಾಗಿರುತ್ತಾರೆ ಎಂದರು.

ADVERTISEMENT

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಹಾಗೂ ಖಾಸಗಿ ಅಲೋಪತಿ ಮತ್ತು ಆಯುರ್ವೇದಿಕ್ ಕ್ಲಿನಿಕ್‌, ಆಸ್ಪತ್ರೆ, ನರ್ಸಿಂಗ್‌ ಹೋಂ, ಬೋಧಕ ಆರೋಗ್ಯ ಸಂಸ್ಥೆಗಳು ಮತ್ತು ಪ್ರಯೋಗಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶೇ 100ರಷ್ಟು ಸಿಬ್ಬಂದಿ ವರ್ಗದವರ ಪಟ್ಟಿಯನ್ನು ಮುಂದಿನ ದಿನಗಳಲ್ಲಿ ಕೋವಿಡ್‌-19 ಲಸಿಕೆ ಹಾಕಿಸುವ ಸಲುವಾಗಿ ಮಾಹಿತಿಯನ್ನು ಕೇಂದ್ರ ಸರ್ಕಾರ ಕೇಳಿದ್ದು, ಕಾರಣ ಎಲ್ಲ ವೈದ್ಯರು ತಮ್ಮ ಆಸ್ಪತ್ರೆಯ ಹಾಗೂ ಕ್ಲಿನಿಕ್‌ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯವರ ಮಾಹಿತಿಯನ್ನು ಶೀಘ್ರ ಪರಿಗಣಿಸಿ, ಈ ಇ-ಮೇಲ್ ವಿಳಾಸrchovijapuracovacc@gmail.com ಇಲ್ಲಿಗೆ ತಕ್ಷಣ ನಿಗದಿತ ಅವಧಿಯಲ್ಲಿ ಕೊಡಲು ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ, ಖಾಸಗಿ ಆಸ್ಪತ್ರೆಗಳ ಮಾಹಿತಿ ಹಾಗೂ ಸಿಬ್ಬಂದಿಯ ವಿವರವಾದ ಮಾಹಿತಿಯನ್ನು ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಿಗೆ ತೆಗೆದುಕೊಳ್ಳಲು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಂದ್ರ ಕಾಪಸೆ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳುಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.