ADVERTISEMENT

ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಕೋವಿಡ್ ಲಸಿಕೆ

​ಪ್ರಜಾವಾಣಿ ವಾರ್ತೆ
Published 22 ಮೇ 2021, 13:20 IST
Last Updated 22 ಮೇ 2021, 13:20 IST
ವಿಜಯಪುರ ನಗರದ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಶನಿವಾರ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ಘಟಕದ 18 ರಿಂದ 44 ವರ್ಷ ವಯೋಮಾನದ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಚಾಲನೆ ನೀಡಿದರು
ವಿಜಯಪುರ ನಗರದ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಶನಿವಾರ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ಘಟಕದ 18 ರಿಂದ 44 ವರ್ಷ ವಯೋಮಾನದ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಚಾಲನೆ ನೀಡಿದರು   

ವಿಜಯಪುರ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ಘಟಕದ 18 ರಿಂದ 44 ವರ್ಷ ವಯೋಮಾನದ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಶನಿವಾರ ನಗರದ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣನಪ್ಪ ಕುರುಬರ, ಸಾರಿಗೆ ಸಿಬ್ಬಂದಿ ಮುಂಚೂಣಿಯಲ್ಲಿ ಇದ್ದು ಕೆಲಸಗಳನ್ನು ನಿರ್ವಹಿಸುತ್ತಿರುವುದರಿಂದ ಸರ್ಕಾರ ಅವರಿಗೆ ಲಸಿಕೆ ಹಾಕಿಸಿಕೊಳ್ಳುವ ಅವಕಾಶ ಮಾಡಿದೆ. ಎಲ್ಲ ಸಿಬ್ಬಂದಿ ಸರ್ಕಾರದ ಮಾರ್ಗಸೂಚಿಯಂತೆ ಸುರಕ್ಷಿತ ಕ್ರಮತೆಗೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಸಂಸ್ಥೆಯ ವಿಜಯಪುರ ವಿಭಾಗದ 100 ಸಿಬ್ಬಂದಿಗೆ ಲಸಿಕೆ ಹಾಕುವ ಕಾರ್ಯಾಕ್ರಮಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ ಒಟ್ಟು 1031 ಸಿಬ್ಬಂದಿ ಲಸಿಕೆ ಹಾಕಿಸಿಕೊಂಡಿರುವುದಾಗಿ ಅವರು ಎಂದು ಹೇಳಿದರು.

ADVERTISEMENT

ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ ಅಗರವಾಲ್, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಂದ್ರ ಕಾಪಸೆ, ಜಿಲ್ಲಾ ಆರ್.ಸಿ .ಎಚ್ ಅಧಿಕಾರಿ ಡಾ. ಮಹೇಶ ನಾಗರಬೆಟ್ಟ, ಡಾ.ಲಕ್ಕಣ್ಣವರ್, ಡಾ.ಗಲಗಲಿ, ಡಾ ಬಿರಾದಾರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.