ADVERTISEMENT

ವಿಜಯಪುರ: ಕೋವಿಡ್ ಲಸಿಕಾ ಅಭಿಯಾನ ಆರಂಭ

​ಪ್ರಜಾವಾಣಿ ವಾರ್ತೆ
Published 16 ಜನವರಿ 2021, 7:42 IST
Last Updated 16 ಜನವರಿ 2021, 7:42 IST
 ಲಕ್ಷ್ಮಣ ಕೊಳೂರಗಿ ಅವರು ಕೋವಿಡ್-19 ಪ್ರಥಮ ಲಸಿಕೆಯನ್ನು ಪಡೆದುಕೊಂಡರು.
ಲಕ್ಷ್ಮಣ ಕೊಳೂರಗಿ ಅವರು ಕೋವಿಡ್-19 ಪ್ರಥಮ ಲಸಿಕೆಯನ್ನು ಪಡೆದುಕೊಂಡರು.   

ವಿಜಯಪುರ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ನೀಡುವ ಕಾರ್ಯಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಗ್ರೂಪ್ ‘ಡಿ’ ನೌಕರ ಲಕ್ಷ್ಮಣ ಕೊಳೂರಗಿ(57) ಅವರು ಕೋವಿಡ್-19 ಪ್ರಥಮ ಲಸಿಕೆಯನ್ನು ಪಡೆದುಕೊಂಡರು. ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಶ್ರೀಶೈಲ ಶಿವಪ್ಪ ಚಟ್ಟರ(59) ಎರಡನೇ ಡೋಸ್, ಜಿಲ್ಲಾ ಆಸ್ಪತ್ರೆಯ ಗ್ರೂಪ್ ‘ಡಿ’ ನೌಕರ ಬಾಬಾಜಾನ್ ತಾಜಿಂತರಕ್(33) ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಕಂಪ್ಯೂಟರ್ ಆಪರೇಟರ್ ಮೀನಾಕ್ಷಿ ಸಲಗರ್(38) ನಾಲ್ಕನೇ ಡೋಸ್ ಪಡೆದುಕೊಂಡರು.

ಕೋವಿಡ್ ಲಸಿಕೆಯನ್ನು ಸರ್ಕಾರದ ನಿರ್ದೇಶನದಂತೆ ಮೊದಲ ಹಂತದಲ್ಲಿ ನಿಗದಿತ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ತಿಳಿಸಿದರು.

ADVERTISEMENT

ಲಸಿಕಾ ಕೇಂದ್ರದಲ್ಲಿ ಪ್ರಧಾನಮಂತ್ರಿ ಭಾಷಣದ ನೇರಪ್ರಸಾರದ ವೀಕ್ಷಣೆ ಮಾಡಲಾಯಿತು. ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌ ಲಸಿಕೆ ಹಾಕುವ ಉದ್ದೇಶಕ್ಕಾಗಿ ಪ್ರತ್ಯೇಕ ಲಸಿಕಾ ಕೇಂದ್ರ ಸ್ಥಾಪಿಸಲಾಗಿದೆ. ಆಧಾರ್ ವೆರಿಫಿಕೇಶನ್ ಕೊಠಡಿ, ಲಸಿಕಾ ಕೊಠಡಿ ಹಾಗೂ ನಿಗಾ ಕೊಠಡಿಗಳನ್ನು ಸ್ಥಾಪಿಸಲಾಗಿದೆ.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಹಾಗೂ ನೋಡಲ್ ಅಧಿಕಾರಿ ಡಾ. ಜಯರಾಜ್, ಜಿಲ್ಲಾಸ್ಪತ್ರೆ ಸರ್ಜನ್ ಡಾ.ಶರಣಪ್ಪ ಕಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಮಹೇಂದ್ರ ಕಾಪಸೆ, ಡಾ. ಲಕ್ಕಣ್ಣವರ್ ಡಾ.ಎಂ ಬಿ ಬಿರಾದಾರ್, ಸಿ.ಎಚ್ ಅಧಿಕಾರಿ ಮಹೇಶ್ ಭಟ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.