ADVERTISEMENT

ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣಕ್ಕೆ ಸಾಲ: ಯತ್ನಾಳ

ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘದಿಂದ ₹ 50 ಲಕ್ಷ ವರೆಗೆ ಸಾಲ

​ಪ್ರಜಾವಾಣಿ ವಾರ್ತೆ
Published 5 ಮೇ 2021, 11:33 IST
Last Updated 5 ಮೇ 2021, 11:33 IST

ವಿಜಯಪುರ: ಖಾಸಗಿ ಆಸ್ಪತ್ರೆಯವರು ತಮ್ಮ ಆಸ್ಪತ್ರೆ ಆವರಣದಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ನಿರ್ಮಾಣ ಮಾಡಲು ಮುಂದೆ ಬಂದಲ್ಲಿ ಅವರಿಗೆ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘದಿಂದ ₹50 ಲಕ್ಷ ವರೆಗೆ ಸಾಲ ನೀಡಲಾಗುವುದು ಎಂದು ಸಂಘದ ಅಧ್ಯಕ್ಷರೂ ಆಗಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.

ಶೇ 12 ರಷ್ಟು ಬಡ್ಡಿ ದರದೊಂದಿಗೆ ಈ ಸಾಲವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಆಕ್ಸಿಜನ್ ಬಳಕೆಯಾದಂತೆ ಬಳಕೆ ಪ್ರಮಾಣದ ಮೇಲೆ ಬರುವ ಆದಾಯವನ್ನು ಆಯಾ ಆಸ್ಪತ್ರೆಯವರು ಸಿದ್ಧಸಿರಿ ಸೌಹಾರ್ದ ಸಹಕಾರಿಗೆ ತುಂಬಬಹುದಾಗಿದ್ದು, ಇದರಿಂದ ಹೆಚ್ಚಿನ ಆಮ್ಲಜನಕದ ಉತ್ಪಾದಿಸುವ ಸಾಮರ್ಥ್ಯವೂ ಹೆಚ್ಚುತ್ತದೆ ಇದರಿಂದ ರೋಗಿಗಳಿಗೂ ಅನಕೂಲವಾಗುತ್ತದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಖಾಸಗಿ ಆಸ್ಪತ್ರೆ ಅಥವಾ ಇನ್ನೀತರರು ಹೊಸ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪಿಸಲು ಮುಂದೆ ಬಂದಲ್ಲಿ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದ ಸಾಲ ಸೌಲಭ್ಯ ಕಲ್ಪಿಸಲಾಗುವುದು, ಸಾಲಕ್ಕಾಗಿ ಅರ್ಜಿ ಕೊಟ್ಟ ಕೆಲವೇ ಗಂಟೆಗಳಲ್ಲಿ ಸಾಲವನ್ನು ಮಂಜೂರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.