ಮುದ್ದೇಬಿಹಾಳ (ವಿಜಯಪುರ ಜಿಲ್ಲೆ): ತಾಲ್ಲೂಕಿನ ಕುಂಚಗನೂರಿನಲ್ಲಿ ಶನಿವಾರ ಅಮಾವಾಸ್ಯೆ ಪ್ರಯುಕ್ತ ಎತ್ತುಗಳ ಮೈತೊಳೆಯಲು ಕೃಷ್ಣಾ ನದಿ ತೀರಕ್ಕೆ ಹೋಗಿದ್ದ ವೇಳೆ ರೈತ ಕಾಶಪ್ಪ ಹಣಮಂತ ಕಂಬಳಿ (38) ಎಂಬುವರು ಮೊಸಳೆ ದಾಳಿಯಿಂದ ಸಾವಿಗೀಡಾಗಿದ್ದಾರೆ.
ತಂಗಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಪಂಪ್‌ಹೌಸ್ ಬಳಿ ಘಟನೆ ನಡೆದಿದೆ. ಸತತ ಐದು ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆಯಾಗಿದೆ ಎಂದು ಮುದ್ದೇಬಿಹಾಳ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.