ADVERTISEMENT

ಬೆಳೆಹಾನಿ | ಆಕ್ಷೇಪಣೆ ಸಲ್ಲಿಸಲು ರೈತರಿಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2025, 5:10 IST
Last Updated 13 ಅಕ್ಟೋಬರ್ 2025, 5:10 IST
ಕೊಲ್ಹಾರ ತಾಲ್ಲೂಕಿನ ಮುಳವಾಡ ಗ್ರಾಮದಲ್ಲಿ ‌ಬೆಳೆಹಾನಿ ಸಮೀಕ್ಷೆಯಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು
ಕೊಲ್ಹಾರ ತಾಲ್ಲೂಕಿನ ಮುಳವಾಡ ಗ್ರಾಮದಲ್ಲಿ ‌ಬೆಳೆಹಾನಿ ಸಮೀಕ್ಷೆಯಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು   

ಕೊಲ್ಹಾರ: ತಾಲ್ಲೂಕು ಆಡಳಿತ ಹಾಗೂ ಕೃಷಿ ಇಲಾಖೆಯಿಂದ ಶನಿವಾರ ಬೆಳೆಹಾನಿಯನ್ನು ಖುದ್ದು ಪರಿಶೀಲಿಸಿ ಆಕ್ಷೇಪಣೆ ಸಲ್ಲಿಸಲು ತಿಳಿಸಿದರು.

ತಹಶೀಲ್ದಾರ್‌ ಸಂತೋಷ ಮಾಗ್ಯರಿ ಹಾಗೂ ತಾಲ್ಲೂಕು ‌ಸಹಾಯಕ‌ ಕೃಷಿ ನಿರ್ದೇಶಕರಾದ ಎಂ.ಎಚ್.ಯರಝರಿ ಜಂಟಿಯಾಗೆ ಭಾನುವಾರ ‌ಕೊಲ್ಹಾರ ತಾಲ್ಲೂಕಿನ ಮುಳವಾಡ ಗ್ರಾಮದಲ್ಲಿ ‌ಮಳೆಯಿಂದ ಬೆಳೆ ಹಾನಿಯಾದ ರೈತರ ಜಮೀನುಗಳಲ್ಲಿ ತೊಗರಿ, ಮೆಕ್ಕೆಜೋಳ, ಹತ್ತಿ, ಈರುಳ್ಳಿ ಬೆಳೆಗಳು ಹಾನಿಯಾದ ಬಗ್ಗೆ ಖುದ್ದಾಗಿ ಪರಿಶೀಲನೆ ಮಾಡಿದರು.

ಈ ಸಮಯದಲ್ಲಿ ಕೃಷಿ ಅಧಿಕಾರಿ ಎಂ.ಕೆ.ಪುರೋಹಿತ, ಕಂದಾಯ ನಿರೀಕ್ಷಕ ಪಿ.ಎಸ್. ಹುಡೇದ ಗ್ರಾಮ ಆಡಳಿತ ಅಧಿಕಾರಿ ಸಂಜು ಜಾಧವ ಹಾಗೂ ಕಂದಾಯ ಮತ್ತು ಕೃಷಿ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

ADVERTISEMENT

ಬೆಳೆ ಹಾನಿಯಾದ ವಿವರವನ್ನು ಆಯಾ ಗ್ರಾಮ‌ ಪಂಚಾಯಿತಿ ನೋಟಿಸ್ ಬೋರ್ಡ್‌ಗೆ ಹಾಕಲಾಗಿದೆ. ರೈತರು ಯಾವುದಾದರೂ ಆಕ್ಷೇಪಣೆಗಳು ಇದ್ದರೆ ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಅ.16ರ ಒಳಗಾಗಿ ಸಲ್ಲಿಸುವಂತೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.