ADVERTISEMENT

ವಿಜಯಪುರ: 'ಮಹಿಳೆಯರಲ್ಲಿ ಸೈಬರ್ ಜಾಗೃತಿ ಅಗತ್ಯ'

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 4:30 IST
Last Updated 6 ಡಿಸೆಂಬರ್ 2025, 4:30 IST
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಡಿಜಿಟಲ್ ಸುರಕ್ಷತೆ ಮತ್ತು ಸೈಬರ್ ಜಾಗೃತಿ’ ಎಂಬ ವಿಷಯದ ಕುರಿತು ನಡೆದ ಒಂದು ದಿನದ ಕಾರ್ಯಾಗಾರವನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹಾಗೂ ಮತ್ತಿತರು ಉದ್ಘಾಟಿಸಿದರು
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಡಿಜಿಟಲ್ ಸುರಕ್ಷತೆ ಮತ್ತು ಸೈಬರ್ ಜಾಗೃತಿ’ ಎಂಬ ವಿಷಯದ ಕುರಿತು ನಡೆದ ಒಂದು ದಿನದ ಕಾರ್ಯಾಗಾರವನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹಾಗೂ ಮತ್ತಿತರು ಉದ್ಘಾಟಿಸಿದರು   

ವಿಜಯಪುರ: ಡಿಜಿಟಲೀಕರಣ ವೇಗವಾಗಿ ಹೆಚ್ಚುತ್ತಿರುವ ಇಂದಿನ ಯುಗದಲ್ಲಿ ಸೈಬರ್ ಅಪರಾಧಗಳೂ ಆತಂಕಕಾರಿ ಮಟ್ಟಕ್ಕೆ ಏರಿದ್ದು, ಅದಕ್ಕೆ ಬಲಿಯಾಗುತ್ತಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆಯರಲ್ಲಿ ಸೈಬರ್ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ಯುಜಿ ಬ್ಲಾಕ್ ಹಾಗೂ ಪ್ರಧಾನಮಂತ್ರಿ ಉಚ್ಛತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಇವರ ಸಹಯೋಗದೊಂದಿಗೆ ಶುಕ್ರವಾರ ಆಯೋಜಿಸಿದ್ದ ‘ಡಿಜಿಟಲ್ ಸುರಕ್ಷತೆ ಮತ್ತು ಸೈಬರ್ ಜಾಗೃತಿ’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಯುವಜನತೆ ಡಿಜಿಟಲ್ ವೇದಿಕೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸುತ್ತಿದ್ದು, ಡಿಜಿಟಲ್ ಸುರಕ್ಷತೆಯ ನಿರ್ಲಕ್ಷ್ಯದಿಂದ ಹಲವು ಗಂಭೀರ ದುಷ್ಪರಿಣಾಮಗಳು ಕಂಡುಬರುತ್ತಿವೆ. ಹೆಚ್ಚಾಗಿ ಮಹಿಳೆಯರೇ ಇದಕ್ಕೆ ಬಲಿಯಾಗುತ್ತಿದ್ದು, ಅವರು ದೌರ್ಜನ್ಯ ಮತ್ತು ಕಿರುಕುಳಕ್ಕೆ ಒಳಗಾಗುತ್ತಿರುವುದು ಆತಂಕಕಾರಿ ಎಂದರು.

ADVERTISEMENT

ಬೆಂಗಳೂರಿನ ಸೈಬರ್ ಕಮಾಂಡ್ ಕೇಂದ್ರದ ವಿಶೇಷ ಕೋಶದ ಪೊಲೀಸ್ ವರಿಷ್ಠಾಧಿಕಾರಿ ಸವಿತಾ ಶ್ರೀನಿವಾಸ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಮಾತನಾಡಿದರು.

ಬೆಂಗಳೂರಿನ ಸೈಬರ್ ಕಮಾಂಡ್ ಕೇಂದ್ರದ ವಿಶೇಷ ಕೋಶದ ಪೊಲೀಸ್ ವರಿಷ್ಠಾಧಿಕಾರಿ ಸವಿತಾ ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು.

ಮಹಿಳಾ ವಿ.ವಿಯ ಪಿಎಂ ಉಷಾ ಯೋಜನೆಯ ಹಿರಿಯ ನೋಡಲ್ ಅಧಿಕಾರಿ ಪ್ರೊ. ಜಿ. ಬಿ. ಸೋನಾರ್, ಪ.ಜಾ, ಪ.ಪಂ ಘಟಕದ ನಿರ್ದೇಶಕ ಪ್ರೊ.ಎನ್.ಎಲ್.ಮಲ್ಲಿಕಾರ್ಜುನ, ಪ್ರೊ. ತಹಮೀನಾ ಕೋಲಾರ, ಸಂದೀಪ್, ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿಯರು, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿನಿಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.