ADVERTISEMENT

ದಕ್ಷಿಣ ಸೋಲಾಪುರ ಗ್ರಾಮ ಪಂಚಾಯಿತಿಗೆ ಇಂದು ಚುನಾವಣೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2022, 19:31 IST
Last Updated 17 ಡಿಸೆಂಬರ್ 2022, 19:31 IST
   

ಸೋಲಾಪುರ(ಮಹಾರಾಷ್ಟ್ರ):ದಕ್ಷಿಣ ಸೋಲಾಪುರ ತಾಲ್ಲೂಕಿನ 17 ಗ್ರಾಮ ಪಂಚಾಯಿತಿಗಳಿಗೆ ಡಿ.18ರಂದು ಚುನಾವಣೆ ನಡೆಯಲಿದೆ.

ಗ್ರಾಮ ಪಂಚಾಯಿತಿ ಚುನಾವಣೆಗೆ 355 ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಒಟ್ಟು 71 ಮತದಾನ ಕೇಂದ್ರಗಳಿದ್ದು, ಎಲ್ಲ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಶನಿವಾರವೇ ಮತಗಟ್ಟೆಗಳಿಗೆತೆರಳಿದ್ದಾರೆ.

ಒಟ್ಟು 17 ಗ್ರಾಮ ಪಂಚಾಯಿತಿಗಳ ಚುನಾವಣೆ ಪೈಕಿ ದರ್ಗನಹಳ್ಳಿ ಗ್ರಾಮ ಪಂಚಾಯಿತಿಗೆ 25 ಸದಸ್ಯರುಅವಿರೋಧ ಆಯ್ಕೆಯಾಗಿದ್ದಾರೆ. ಉಳಿದ 16 ಗ್ರಾಮ ಪಂಚಾಯಿತಿಗಳಿಗೆ 148 ಸದಸ್ಯರು ಆಯ್ಕೆಯಾಗಬೇಕಾಗಿದೆ.ಗ್ರಾಮ ಪಂಚಾಯಿತಿ ಸದಸ್ಯರ ಸಹಿತ ಅಧ್ಯಕ್ಷರ ನೇರ ಆಯ್ಕೆ ನಡೆಯಲಿದೆ.

ADVERTISEMENT

ಚುನಾವಣೆ ಪ್ರಕ್ರಿಯೆ ಸುಗಮವಾಗಿ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ. ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ದಕ್ಷಿಣ ಸೋಲಾಪುರ ತಾಲ್ಲೂಕು ಚುನಾವಣಾ ಅಧಿಕಾರಿ ಹಾಗೂ ತಹಶೀಲ್ದಾರ್‌ ಕುಂಬಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.