ವಿಜಯಪುರ: ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ಸಿಂದಗಿ ನಾಕಾ ವರೆಗಿನ ಮುಖ್ಯ ರಸ್ತೆಯನ್ನುಡಲ್ಟ್ (ಡೈರಕ್ಟರೇಟ್ ಆಫ್ ಅರ್ಬನ್ ಲ್ಯಾಂಡ್ ಟ್ರಾನ್ಸ್ ಪೋರ್ಟ್) ಯೋಜನೆಯಡಿ ಸುಧಾರಣೆ ಮಾಡುವ ಕುರಿತುಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ನೇತೃತ್ವದಲ್ಲಿ ಚರ್ಚೆ ನಡೆಯಿತು.
ನಗರದ ಸಿಂದಗಿ ರಸ್ತೆಯಿಂದ ಗೋಳಗುಮ್ಮಟ, ಡಾ.ಬಿ.ಆರ್ ಅಂಬೇಡ್ಕರ್ ಸರ್ಕಲ್, ಗಾಂಧಿಚೌಕ್, ವಾಟರ್ ಟ್ಯಾಂಕ್, ಸರ್ಕಾರಿ ಆಸ್ಪತ್ರೆ ಹಾಗೂ ಅಲ್ ಆಮೀನ್ ಕಾಲೇಜ್, ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಉನ್ನತ ದರ್ಜೆಯ ರಸ್ತೆ ನಿರ್ಮಿಸುವ ಉದ್ದೇಶ ಹೊಂದಲಾಗಿದ್ದು, ಬಸ್, ಇತರೆ ವಾಹನ ಹಾಗೂ ಬೈಸಿಕಲ್ ಮತ್ತು ಟಾಂಗಾಗಳಿಗೆ ಪ್ರತ್ಯೇಕ ರಸ್ತೆ ರೂಪಿಸಲು ಆರಂಭಿಕ ಚರ್ಚೆ ನಡೆಯಿತು.
ಈ ರಸ್ತೆ ಸುಧಾರಣೆಗಾಗಿಕೇಂದ್ರ ಸರ್ಕಾರದಿಂದ ಗರಿಷ್ಠ ಪ್ರಮಾಣದ ಅನುದಾನ ಮಂಜೂರಾತಿಗೆ ಪ್ರಯತ್ನಿಸುವಂತೆ ಡಲ್ಟ್ ಯೋಜನೆಯ ವಿಶೇಷ ಅಧಿಕಾರಿ, ಜಂಟಿ ನಿರ್ದೇಶಕಿ ಮೋನಿಕಾ ಕಷ್ಕರಿ ಅವರಿಗೆ ಜಿಲ್ಲಾಧಿಕಾರಿ ಸಲಹೆ ನೀಡಿದರು.
ನಗರದ ಮುಖ್ಯ ರಸ್ತೆ ಇದಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳು ಮುಂದಿನ ದಿನಗಳಲ್ಲಿ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಅವರು ಸಲಹೆ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ಉಪವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ, ಡಿಟಿಒ ಡಿ. ಬಿರಾದಾರ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ವಿಜಯಕುಮಾರ್ ಅಜೂರ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಪಾಟೀಲ, ಡಲ್ಟ್ ಸಂಯೋಜಕ ಅಭಿಷೇಕ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.