ADVERTISEMENT

ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ: ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2021, 14:36 IST
Last Updated 17 ಮಾರ್ಚ್ 2021, 14:36 IST
ನಿಡಗುಂದಿ ತಾಲ್ಲೂಕಿನ ಯಲಗೂರ ಗ್ರಾಮದಲ್ಲಿ ಆಯೋಜಿಸಲಾಗಿರುವ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಅವರು ಬುಧವಾರ ಪೂರ್ವಭಾವಿ ಸಭೆ ನಡೆಸಿದರು 
ನಿಡಗುಂದಿ ತಾಲ್ಲೂಕಿನ ಯಲಗೂರ ಗ್ರಾಮದಲ್ಲಿ ಆಯೋಜಿಸಲಾಗಿರುವ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಅವರು ಬುಧವಾರ ಪೂರ್ವಭಾವಿ ಸಭೆ ನಡೆಸಿದರು    

ವಿಜಯಪುರ: ನಿಡಗುಂದಿ ತಾಲ್ಲೂಕಿನ ಯಲಗೂರ ಗ್ರಾಮದಲ್ಲಿ ಮಾ.20 ರಂದು ಜಿಲ್ಲಾಧಿಕಾರಿ ವಾಸ್ತವ್ಯದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಅವರು ಬುಧವಾರ ಪೂರ್ವಭಾವಿ ಸಭೆ ನಡೆಸಿದರು.

ಗ್ರಾಮವಾಸ್ತವ್ಯದಲ್ಲಿ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು, ಗ್ರಾಮಸ್ಥರ ಕುಂದುಕೊರತೆಗಳ ಮೇಲಿನ ಕ್ರಮಗಳ ಜೊತೆಗೆ ಪ್ರತ್ಯೇಕ ಕೌಂಟರ್ ಸ್ಥಾಪಿಸಿ, ಮನವಿ ಪತ್ರಗಳನ್ನು ಸಹ ಪಡೆಯಲು ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

ಅರ್ಹ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ, ಪ್ರತಿ ಪಿಂಚಣಿ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕು.
ಕ್ರಿಯಾಯೋಜನೆಯನ್ವಯ ರಸ್ತೆಗಳಿಗೆ ಅನುದಾನ ಖರ್ಚು, ಆಶ್ರಯ ಮನೆಗಳ ಸೌಲಭ್ಯ, ಕೊಳವೆ ಬಾವಿಗಳ ಸೌಲಭ್ಯ, ಅಂಗವಿಕಲರಿಗೆ ತ್ರಿಚಕ್ರವಾಹನ ಸಹಾಯಧನ ಸೌಲಭ್ಯ, ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥಿ, ಶಿಕ್ಷಣ ಇಲಾಖೆ ಸೇರಿದಂತೆ ಗ್ರಾಮ ಪಂಚಯ್ತಿ ವ್ಯಾಪ್ತಿ ಮತ್ತು ಗ್ರಾಮಸ್ಥರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ತಿಳಿಸಿದರು.

ADVERTISEMENT

ವಿವಿಧ ಗ್ರಾಮದಲ್ಲಿ ಜಿಲ್ಲಾಧಿಕಾರಿ ವಾಸ್ತವ್ಯ ಮಾಡುವ ಈ ಕಾರ್ಯಕ್ರಮವು ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದು, ಗ್ರಾಮಸ್ಥರ ಕುಂದುಕೊರತೆಗಳಿಗೆ ಸ್ಪಂದಿಸುವಂತಾಗಬೇಕು ಎಂದು ತಿಳಿಸಿದರು.

ಜಿಲ್ಲಾಮಟ್ಟದ ಅಧಿಕಾರಿಗಳು ತಪ್ಪದೇ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರಬೇಕು, ಯಾವುದೇ ರೀತಿಯ ಲೋಪಕ್ಕೆ ಅವಕಾಶ ನೀಡದೆ ಸಾರ್ವಜನಿಕರಿಗೆ ಸಕಾಲಕ್ಕೆ ಸ್ಪಂದಿಸುವ ಮೂಲಕ ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಉಪವಿಭಾಗಾಧಿಕಾರಿ ರಾಮಚಂದ್ರ ಗಢಾದೆ, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.