ADVERTISEMENT

ಅನುದಾನ ಸಮರ್ಪಕ ಬಳಕೆಗೆ ಡಿ.ಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2024, 15:45 IST
Last Updated 26 ಸೆಪ್ಟೆಂಬರ್ 2024, 15:45 IST
ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್‌ ಮಾತನಾಡಿದರು
ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್‌ ಮಾತನಾಡಿದರು   

ವಿಜಯಪುರ: ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ಅನುದಾನವನ್ನು ಲ್ಯಾಪ್ಸ್ ಆಗದಂತೆ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ 2024-25ನೇ ಸಾಲಿನ ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪ ಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಆಗಸ್ಟ್-2024 ರ ಅಂತ್ಯದವರೆಗೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸದ್ಯ ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ಬಳಸಿಕೊಂಡು ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸುವಂತೆ ಸೂಚಿಸಿ, ಇನ್ನುಳಿದ ಬಾಕಿ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ADVERTISEMENT

ನಂತರ ನಡೆದ ಮ್ಯಾನುವಲ್ ಸ್ಕಾೃವೆಂಜರ್ ನಿಯೋಜನೆ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ-2013 ಸಭೆಯಲ್ಲಿ ಜಿಲ್ಲಾಧಿಕಾರಿ ಮಾತನಾಡಿ, ಜಿಲ್ಲೆಯ ಎಲ್ಲ ಪೌರ ಕಾರ್ಮಿಕರಿಗೆ ವಸತಿ, ಆರೋಗ್ಯ ಹಾಗೂ ಸುರಕ್ಷಾ ಕವಚಗಳನ್ನು ಒದಗಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಹೇಳಿದರು.

ಹೊರಗುತ್ತಿಗೆ ಆಧಾರದಲ್ಲಿರುವ ಪೌರ ಕಾರ್ಮಿಕರಿಗೆ ಸಮರ್ಪಕವಾಗಿ ಇಪಿಎಫ್, ಇಎಸ್‌ಐ ಕಟಾವು ಕುರಿತು ನಿಯತಮಿತವಾಗಿ ಪರಿಶೀಲಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಪೌರ ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ತಜ್ಞ ವೈದ್ಯರಿಂದ ನಡೆಸಬೇಕು ಎಂದು ಸೂಚಿಸಿದರು.

ಜಿಲ್ಲೆಯ ಪೌರ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಸದಸ್ಯರು, ಮುಖ್ಯ ಅಡುಗೆದಾರರು, ಅಡುಗೆ ಸಹಾಯಕರು, ವಾರ್ಡನ್‌ಗಳು ಸೇರಿದಂತೆ ಹೊರಗುತ್ತಿಗೆ ಆಧಾರದಡಿ ಕಾರ್ಯನಿರ್ವಹಿಸುತ್ತಿರುವವರಿಗೆ ಆರೋಗ್ಯ ವಿಮೆ ಯೋಜನೆ ಸೌಲಭ್ಯ ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ ಮಾನವರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ ಸೌದಾಗರ, ಪುರಸಭೆಯ ಮುಖ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.