ADVERTISEMENT

ಕೋವಿಡ್‌ನಿಂದ ಸಾವು: ಸಮರ್ಪಕ ಪರಿಹಾರ

ಅಧಿಕಾರಿಗಳಿಗೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 15:57 IST
Last Updated 7 ಆಗಸ್ಟ್ 2021, 15:57 IST
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿದರು
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿದರು   

ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್‍ದಿಂದ ಸಾವಿಗೀಡಾದವರ ಕುಟುಂಬದವರಿಗೆ ಸರ್ಕಾರದ ಮಾರ್ಗಸೂಚಿಯನ್ವಯ ಪರಿಹಾರ ಧನ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ಹಾಗೂ ಪ್ರವಾಹ ಪರಿಸ್ಥಿತಿಗಳ ಬಗ್ಗೆ ಅಧಿಕಾರಿಗಳು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ನಡೆದಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ಸಂತ್ರಸ್ತರ ಕುಟುಂಬಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸುವ ಮೂಲಕ ಅವರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದರು.

ADVERTISEMENT

ಜಿಲ್ಲೆಯಲ್ಲಿ ಕೋವಿಡ್ ಮೂರನೇ ಅಲೆ ಸಮಪರ್ಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ‘ವೈದ್ಯರ ನಡೆ ಹಳ್ಳಿಗಳ ಕಡೆ’ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಪ್ರವಾಹ ಪೀಡಿತ ಸಂತ್ರಸ್ತರಿಗೆ ಸೂಕ್ತ ರೀತಿಯಲ್ಲಿ ಸರ್ಕಾರದ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳಬೇಕು. ಮನೆ, ಬೆಳೆ ಹಾನಿ ಸಮೀಕ್ಷೆ ಆಧಾರದ ಮೇಲೆ ಪರಿಹಾರ ದೊರಕಿಸಲು ಪ್ರಯತ್ನಿಸಲಾಗುವುದು ಅಧಿಕಾರಿಗಳು ಕೂಡ ಯಾರಿಗೂ ಅನ್ಯಾಯ ಆಗದಂತೆ ನೋಡಿಕೊಳ್ಳಲು ಅವರು ಸೂಚಿಸಿದರು.

ಶಾಸಕರಾದ ಶಿವಾನಂದ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ, ಯಶವಂತರಾಯಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ರಾಜ್ಯ ಬೀಜ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಉಪವಿಭಾಗಾಧಿಕಾರಿ ರಾಹುಲ್ ಸಿಂಧೆ, ರಮೇಶ ಕಳಸದ, ಡಿಎಚ್‌ಒ ಡಾ.ರಾಜಕುಮಾರ ಯರಗಲ್‌ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.