ವಿಜಯಪುರ: ಸಿಂದಗಿ ಉರ್ದು ಶಾಲೆ ಹಿಂದಿನ (ಕಂಟೈನ್ಮೆಂಟ್ ವಲಯದ) ನಿವಾಸಿ, 55 ವರ್ಷ ವಯೋಮಾನದ (ಪಿ 1,67,277 ವ್ಯಕ್ತಿಯೊಬ್ಬರುಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರತಿಳಿಸಿದ್ದಾರೆ.
ತೀವ್ರ ಶ್ವಾಸಕೋಶ ತೊಂದರೆ, ರಕ್ತದೊತ್ತಡ, ಸಕ್ಕರೆ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಹೋಂ ಐಸೊಲೇಷನ್‌ನಲ್ಲಿ ಇದ್ದರು. ರ‍್ಯಾಪಿಡ್ ಆಂಟಿಜನ್ ಟೆಸ್ಟ್ ಮೂಲಕ ಕೋವಿಡ್ ಪಾಸಿಟಿವ್ ಎಂದು ಆಗಸ್ಟ್ 6 ರಂದು ಧೃಡಪಟ್ಟಿತ್ತು. ತೀವ್ರತರ ಕಾಯಿಲೆಗಳಿಂದ ಬಳಲುತ್ತಿದ್ದ ಇವರು ಆಸ್ಪತ್ರೆಗೆ ಸಾಗಿಸುವ ಮುನ್ನ ಮನೆಯಲ್ಲೇ ಶುಕ್ರವಾರ ಸಾವಿಗೀಡಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ನಿಂದ ಸಾವಿಗೀಡಾದವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪೀಡಿತರ ಸಂಖ್ಯೆ 3706ಕ್ಕೆ ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.