ADVERTISEMENT

ವಿಕೇಂದ್ರಿಕೃತ ತ್ಯಾಜ್ಯ ನಿರ್ವಹಣಾ ಘಟಕ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2021, 15:26 IST
Last Updated 6 ಫೆಬ್ರುವರಿ 2021, 15:26 IST
ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಿಕೇಂದ್ರಿಕೃತ ತ್ಯಾಜ್ಯ ನಿರ್ವಹಣಾ ಘಟಕಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಶನಿವಾರ ಪರಿಶೀಲನೆ ನಡೆಸಿದರು 
ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಿಕೇಂದ್ರಿಕೃತ ತ್ಯಾಜ್ಯ ನಿರ್ವಹಣಾ ಘಟಕಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಶನಿವಾರ ಪರಿಶೀಲನೆ ನಡೆಸಿದರು    

ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಿಕೇಂದ್ರಿಕೃತ ತ್ಯಾಜ್ಯ ನಿರ್ವಹಣಾ ಘಟಕಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಶನಿವಾರ ಪರಿಶೀಲನೆ ನಡೆಸಿದರು.

22ನೇವಾರ್ಡ್‌ನಲ್ಲಿ ನಿರ್ಮಿಸಿರುವ ವಿಕೇಂದ್ರಿಕೃತ ತ್ಯಾಜ್ಯ ನಿರ್ವಹಣಾ ಘಟಕವನ್ನು ಪರಿಶೀಲಿಸಿದ ಅವರು, ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಜೊತೆಗೆ ಅಧಿಕೃತ ಪ್ರಯೋಗಾಲಯದಿಂದ ವರದಿ ಪಡೆದು ಗೊಬ್ಬರ ಮಾರಾಟ ಮಾಡುವಂತೆ ಸೂಚನೆ ನೀಡಿದರು.

ವಾರ್ಡ್ ನಂ 14 ರ ಡಾಲರ್ಸ್ ಕಾಲೊನಿಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಕೇಂದ್ರಿಕೃತ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ ಅವರು, ಘಟಕ ನಿರ್ಮಾಣ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಮಹಾನಗರ ಪಾಲಿಕೆಯ ಕಾರ್ಯಪಾಲಕ ಎಂಜಿನಿಯರ್‌ ಡಿ.ಎಚ್. ಕಿರೇಸೂರ, ಡಿಯುಡಿಸಿ ಯೋಜನಾ ನಿರ್ದೇಶಕ ವಿಜಯ ಮೆಕ್ಕಳಕಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ (ಪರಿಸರ) ಎಸ್.ಎಸ್.ಸುರ್ಖಿ, ಪರಿಸರ ಎಂಜಿನಿಯರ್‌ ಡಾ.ಪ್ರಕಾಶ ಗೂಳಪ್ಪಗೊಳ, ಪಾಲಿಕೆಯ ಆರೋಗ್ಯ ವಿಭಾಗದ ಸಿಬ್ಬಂದಿಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.