ADVERTISEMENT

ರಾಜ್ಯೋತ್ಸವ ಸರಳ ಆಚರಣೆಗೆ ನಿರ್ಧಾರ: ವಿಜಯಪುರ ಜಿಲ್ಲಾಧಿಕಾರಿ ಸುನೀಲ್‌ಕುಮಾರ್‌

ಕೋವಿಡ್ ವಾರಿಯರ್ಸ್‌ಗಳಿಗೆ ವಿಶೇಷ ಸನ್ಮಾನ: ಜಿಲ್ಲಾಧಿಕಾರಿ ಸುನೀಲ್‌ಕುಮಾರ್‌

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2020, 13:17 IST
Last Updated 26 ಅಕ್ಟೋಬರ್ 2020, 13:17 IST
ಪಿ.ಸುನೀಲ್‌ಕುಮಾರ್‌
ಪಿ.ಸುನೀಲ್‌ಕುಮಾರ್‌   

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ನವೆಂಬರ್‌ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ನಿರ್ದರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲು ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಿಲಾಗಿದೆ ಎಂದರು.

ADVERTISEMENT

ರಾಜ್ಯೋತ್ಸವ ಅಂಗವಾಗಿ ಕೋವಿಡ್ ವಾರಿಯರ್ಸ್‌ಗಳಿಗೆ, ವಿಶೇಷವಾಗಿ ಆಸ್ಪತ್ರೆಗಳ ವೈದ್ಯ ಸಿಬ್ಬಂದಿ, ಲ್ಯಾಬ್ ಟೆಕ್ನಿಷಿಯನ್, ಪೊಲೀಸ್‌, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರಿಗೆ ಹಾಗೂ ಇಲಾಖಾವಾರು ಅತ್ಯುತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಗುರುತಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳ ಸಾಧಕರಿಗೂ ಸನ್ಮಾನಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋವಿಂದ ರೆಡ್ಡಿ ಅಧ್ಯಕ್ಷತೆಯಲ್ಲಿ ಇರುವ ಸಮಿತಿ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡುವ ಕುರಿತಂತೆ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯೋತ್ಸವ ಮೆರವಣಿಗೆ, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸ್ತಬ್ದಚಿತ್ರಗಳ ಮೆರವಣಿಗೆ, ಸಾಮೂಹಿಕ ನೃತ್ಯ ಕಾರ್ಯಕ್ರಮಗಳು ಹಮ್ಮಿಕೊಳ್ಳದಿರಲು ನಿರ್ಧರಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೊವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಾಮ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಿಜಯಪುರ: 2020ನೇ ಸಾಲಿನ ಜಿಲ್ಲಾ ಕರ್ನಾಟಕ ರಾಜೋತ್ಸವ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ವಾಸವಿದ್ದು, ವಿಶೇಷ ಸಾಧನೆಗೈದ ಮಹನಿಯರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಲು ಜಿಲ್ಲಾಡಳಿತ ತೀರ್ಮಾನಿಸಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.

ಕಲೆ, ಸಾಹಿತ್ಯ, ರಂಗಭೂಮಿ, ಸುಗಮ ಸಂಗೀತ, ಜನಪದ ಸಂಗೀತ, ಶಿಲ್ಪಕಲೆ, ಸಮಾಜ ಕಾರ್ಯ, ಕೃಷಿ ತೋಟಗಾರಿಕೆ, ವೈದ್ಯಕೀಯ ಇತ್ಯಾದಿ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರು ತಮ್ಮ ಸಾಧನೆಯ ವಿವರಗಳನ್ನು ಅ.27ರ ಸಂಜೆ 5ರೊಳಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ರಂಗಮಂದಿರ, ವಿಜಯಪುರ ಇವರ ಕಚೇರಿಯಲ್ಲಿ ಸಲ್ಲಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.